ಅದ್ದೂರಿಯಾಗಿ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

78th Independence Day celebration by Hosting of the flag by the district in-charge minister

ಅದ್ದೂರಿಯಾಗಿ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಮೈಸೂರು:  ಆಗಸ್ಟ್ 15 ಅದ್ದೂರಿಯಾಗಿ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಯನ್ನು ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಆಚರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಧ್ವಜವಂದನೆ ಸ್ವೀಕರಿಸಿದರು. 
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ  ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪರಿವೀಕ್ಷಣೆ ನಡೆಸಿದರು. 
ಪೆರೇಡ್ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪೆರೇಡ್ ನಲ್ಲಿ ಪೊಲೀಸ್ ಇಲಾಖೆಯ ಪುರುಷ ಹಾಗೂ ಮಹಿಳಾ ತಂಡಗಳು, ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ, ಅಬಕಾರಿ ದಳ, ಎನ್ ಎಸ್ ಎಸ್, ಎನ್ ಸಿ ಸಿ ತಂಡಗಳು, ವಿಶೇಷ ಚೇತನ ಮಕ್ಕಳ ತಂಡ ಹಾಗೂ ಶಾಲಾ ಕಾಲೇಜು ತಂಡಗಳು ಭಾಗವಹಿಸಿದ್ದವು. ಸಚಿವರು 78 ಸ್ವಾತಂತ್ರೋತ್ಸವ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು. 


ಗುಡ್ ಶಫರ್ಡ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಂದ ವಿವಿಧತೆಯಲ್ಲಿ ಏಕತೆ ದೇಶಭಕ್ತಿ ಗೀತೆ, ನಿರ್ಮಲ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ಮಕ್ಕಳಿಂದ ದೇಶ ಭಕ್ತಿ ಗೀತೆಗೆ ಸಮೂಹ ನೃತ್ಯ ಹಾಗೂ ಸಂತ ಫಿಲೋಮಿನಾ ಪ್ರೌಢ ಶಾಲಾ ಮಕ್ಕಳಿಂದ ದೇಶ ಪ್ರೇಮಿ ಭಗತ್ ಸಿಂಗ್ ಅವರ ಮರಣ ದಂಡನೆಯ ನೃತ್ಯ ರೂಪಕವನ್ನು ಪ್ರದರ್ಶನವನ್ನು ಪ್ರಸ್ತುತಪಡಿಸಿದರು. 
ಸಮಾರಂಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಮೂಡಾ ಅಧ್ಯಕ್ಷರಾದ ಕೆ ಮರಿಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ದಕ್ಷಿಣ ವಲಯ ಐ ಜಿ ಪಿ ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತ ರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜ್ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.