ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ದೆಹಲಿ ನ್ಯಾಯಾಲಯಗಳಲ್ಲಿ ಬೃಹತ್ ಪ್ರತಿಭಟನೆಗೆ ಎಎಪಿ ಕಾನೂನು ಘಟಕ ಕರೆ

ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ದೆಹಲಿ ನ್ಯಾಯಾಲಯಗಳಲ್ಲಿ ಬೃಹತ್ ಪ್ರತಿಭಟನೆಗೆ ಎಎಪಿ ಕಾನೂನು ಘಟಕ ಕರೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಕಾನೂನು ಕೋಶವು ರಾಷ್ಟ್ರ ರಾಜಧಾನಿಯ ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 27 ರಂದು ಪ್ರತಿಭಟನೆಗೆ ಕರೆ ನೀಡಿದೆ ಎಂದು ಎಎಪಿಯ ಕಾನೂನು ಕೋಶದ ರಾಜ್ಯಾಧ್ಯಕ್ಷ ವಕೀಲ ಸಂಜೀವ್ ನಾಸಿಯಾರ್ ರವರು ಹೇಳಿದ್ದಾರೆ.

ದೆಹಲಿಯ ಬಾರ್ ಕೌನ್ಸಿಲ್‌ನ ಉಪಾಧ್ಯಕ್ಷರೂ ಆಗಿರುವ ವಕೀಲ ಸಂಜೀವ್ ನಾಸಿಯಾರ್ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ರೀತಿ ನೋಡಿದರೆ ಅವರ ವಿರುದ್ಧ ಪಿತೂರಿ ಇದೆ ಎಂದು ತೋರಿಸುತ್ತದೆ. ಹೀಗಾಗಿ ವಕೀಲ ಸಮುದಾಯ ಮಾರ್ಚ್ 27 ರಂದು ಮಧ್ಯಾಹ್ನ 12.30ಕ್ಕೆ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಎಲ್ಲರೂ ನ್ಯಾಯಾಲಯದಲ್ಲಿ ಸಭೆ ಸೇರಿ ಪ್ರತಿಭಟನೆ ನಡೆಸುತ್ತೇವೆ. ನಾವು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ನಿಲ್ಲುತ್ತೇವೆ ಎಂದು ನಾಸಿಯರ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. ಪಟಿಯಾಲ ಹೌಸ್ ಕೋರ್ಟ್, ದ್ವಾರಕಾ ಕೋರ್ಟ್, ಸಾಕೇತ್ ಕೋರ್ಟ್, ಕರ್ಕರ್ಡೂನಾ ಕೋರ್ಟ್ ಟಿಸ್ ಹಜಾರಿ ಕೋರ್ಟ್ ಮತ್ತು ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿದಿದ್ದಾರೆ.