ಏರ್ ಇಂಡಿಯಾ ಸಿಬ್ಬಂದಿ ಸಾಮೂಹಿಕ ರಜೆ 86ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು
ನವದೆಹಲಿ: ಅನಾರೋಗ್ಯ ಕಾರಣ ನೀಡಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಿಬ್ಬಂದಿ ಸಾಮೂಹಿಕ ರಜೆ ಹಾಕಿರುವ ಪರಿಣಾಮ ಏರ್ ಇಂಡಿಯಾದ 86 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಂಡಿದೆ. ಸುಮಾರು 300 ಹಿರಿಯ ಕ್ಯಾಬಿನ್ ಸಿಬ್ಬಂದಿ ಕೊನೆಯ ಕ್ಷಣದಲ್ಲಿ ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಗೈರಾಗಿದ್ದಾರೆ. ಮೊಬೈಲ್ ಪೋನ್‌ಗಳನ್ನು ಆಫ್ ಮಾಡಿಕೊಂಡಿದ್ದಾರೆ. ಮತ್ತು ಅಂತಾರಾಷ್ಟ್ರೀಯ ದೇಶೀಯ ವಿಮಾನಗಳ ಕಾರ್ಯಾಚರಣೆ ರದ್ದುಗೊಳಿಸಲಾಗಿದೆ.
Advertisement
ಜಾಹೀರಾತಿಗಾಗಿ ಸಂಪರ್ಕಿಸಿ 6362546216
ಸಂಬಳದ ವಿಚಾರದಲ್ಲಿ ಅಸಮಾಧಾನ ಹೊಂದಿರುವ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ನೋಟಿಸ್ ನೀಡದೇ ಕೆಲಸಕ್ಕೆ ಗೈರಾಗಿದ್ದಾರೆ. ಅನಾರೋಗ್ಯ ಕಾರಣ ನೀಡಿ ಸಾಮೂಹಿಕವಾಗಿ ಸಿಬ್ಬಂದಿ ರಜೆ ಹಾಕಿದ್ದಾರೆ. ಈ ಅನಿರೀಕ್ಷಿತ ಅಡಚಣೆಗಾಗಿ ನಾವು ನಮ್ಮ ಅತಿಥಿಗಳಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಈಗ ಎದುರಾಗಿರುವ ಪರಿಸ್ಥಿತಿಯು, ಇದುವರೆಗೆ ನಾವು ಒದಗಿಸಿರುವ ಸೇವೆಯ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದ್ದಾರೆ.