ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು : ಎಸ್ ಮನೋಹರ್

Appropriate legal action should be taken against Beltangadi MLA Harish Poonja: S Manohar

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು : ಎಸ್ ಮನೋಹರ್
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರು ಪ್ರಸ್ತುತ ಬೆಳಗಾವಿ ವಿಧಾನಸಭೆಯ ಅಧಿವೇಶನದಲ್ಲಿ ಆನೆಗಳನ್ನು ಕೊಲ್ಲಲು ಅನುಮತಿ ಬೇಕು ಎಂದು ಕೇಳಿರುವುದು ಅತ್ಯಂತ ದುರಾದೃಷ್ಟಕರ ಸಂಗತಿ ವನ್ಯಪ್ರಾಣಿಗಳನ್ನು ಕೊಲ್ಲಲು ಅನುಮತಿ ಕೇಳಿರುವ ಶಾಸಕರ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದರು.
ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ರವರು ಮಾತನಾಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ರವರು ಆನೆಗಳನ್ನು ಕೊಳ್ಳಲು ಅನುಮತಿ ಬೇಕು ಎಂಬುವ ಹೇಳಿಕೆ ವಿಧಾನಸಭೆ ಅಧಿವೇಶನದಲ್ಲಿ ಸದನದಲ್ಲಿ ಬಹಿರಂಗವಾಗಿ ಆನೆಗಳನ್ನು ಕೊಲ್ಲಲು ಅನುಮತಿ ಬೇಕು ಎಂದು ಕೇಳಿರುವ ಹಿನ್ನೆಲೆಯಲ್ಲಿ ಈತನ ಹೇಳಿಕೆ ಅತ್ಯಂತ ಗಂಭೀರವಾಗಿದ್ದು ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು, ಜನಪ್ರತಿನಿಧಿಯಾಗಿರುವ ಶಾಸಕ ಹರೀಶ್ ಪೂಂಜಾ ರವರ ಹೇಳಿಕೆಯಿಂದ ಪ್ರಾಣಿಗಳಿಗೆ ರಕ್ಷಣೆ ಇಲ್ಲದಂತ ಪರಿಸ್ಥಿತಿ ಉದ್ಭವಿಸುತ್ತದೆ ಇಂತಹ ಕ್ರೂರ ಮನಸ್ಥಿತಿಯ ವ್ಯಕ್ತಿಗಳ ಹೇಳಿಕೆಯಿಂದ ವನ್ಯಜೀವಿಗಳ ಸಂರಕ್ಷಣೆಗೆ ಸಂಕಷ್ಟ ಎದುರಾಗಲಿದೆ, ವನ್ಯಜೀವಿಗಳನ್ನ ಕೊಲ್ಲಬೇಕೆಂದು ಬಹಿರಂಗವಾಗಿ ಮನವಿ ಮಾಡಿರುವ ಹರೀಶ್ ಪೂಂಜಾನ ವಿರುದ್ಧ ಕೂಡಲೇ ಅರಣ್ಯ ಇಲಾಖೆಯು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಲೇಬೇಕೆಂದು ಈ ನಿಯೋಗದ ಮೂಲಕ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದೇವೆ ಎಂದರು.