ಕ್ಷಮೆಯಾಚಿಸಿದ ಯೋಗ ಗುರು ಬಾಬಾರಾಮ್‌ದೇವ್‌

ಕ್ಷಮೆಯಾಚಿಸಿದ ಯೋಗ ಗುರು ಬಾಬಾರಾಮ್‌ದೇವ್‌
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ನವದೆಹಲಿ: ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸದಿದ್ದಕ್ಕಾಗಿ ಯೋಗ ಗುರು ಬಾಬಾ ರಾಮದೇವ್ ಮಂಗಳವಾರ ಬೇಷರತ್ ಕ್ಷಮೆಯಾಚಿಸಿದ್ದಾರೆ.

ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಏಕೆ ಪ್ರಾರಂಭಿಸಬಾರದು ಎಂದು ಕೇಳಿ ಶೋಕಾಸ್ ನೋಟಿಸ್‌ ಜಾರಿ ಮಾಡಿದ ಕೆಲವು ದಿನಗಳ ನಂತರ ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದನ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಇಂದು ಸುಪ್ರೀಂಕೋರ್ಟ್‌ಗೆ ಹಾಜರಾಗಿದ್ದಾರೆ.

ಮಾ.19ರಂದು, ಪ್ರಕರಣದಲ್ಲಿ ನೀಡಲಾದ ನೋಟಿಸ್‌ಗೆ ಕಂಪನಿಯು ಪ್ರತಿಕ್ರಿಯಿಸಲು ವಿಫಲವಾದ ಕಾರಣಕ್ಕೆ ವಿನಾಯಿತಿ ನೀಡಿದ ನಂತರ ಸುಪ್ರೀಂ ಕೋರ್ಟ್ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ ಹಾಜರಾಗುವಂತೆ ಸೂಚಿಸಿತ್ತು. ಪತಂಜಲಿ ನೀಡಿದ ಜಾಹೀರಾತುಗಳು ರಾಮ್‌ದೇವ್ ಅವರ ಅನುಮೋದನೆಯನ್ನು ಪ್ರತಿಬಿಂಬಿಸುವುದರಿಂದ ಅವರಿಗೆ ಶೋಕಾಸ್ ನೋಟಿಸ್‌ ನೀಡುವುದು ಸೂಕ್ತವೆಂದು ಪರಿಗಣಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ರೋಗಗಳಿಗೆ ಚಿಕಿತ್ಸೆ ನೀಡುವ ಉತ್ಪನ್ನಗಳ ಜಾಹೀರಾತುಗಳನ್ನು ಪ್ರಕಟಿಸುವುದಿಲ್ಲ ಎಂಬ ತನ್ನ ಒಪ್ಪಂದವನ್ನು ಪಾಲಿಸದ ಕಂಪನಿಯನ್ನು ನ್ಯಾಯಾಲಯವು ತೀವ್ರವಾಗಿ ಟೀಕಿಸಿದೆ.