ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಶಾಖಾ ಕಚೇರಿಯನ್ನು ಮದ್ದೂರು ಪಟ್ಟಣದಲ್ಲಿ ಸ್ಥಾಪಿಸುವ ಪ್ರಸ್ತಾವನೆಯ ಪರಿಶೀಲನೆಯಲ್ಲಿದೆ: ಡಿ.ಕೆ.ಶಿವಕುಮಾರ್
Bangalore-Mysore Infrastructure Corridor under consideration for setting up branch office in Maddur town: DK Shivakumar
ಬೆಳಗಾವಿ: ಬೆಂಗಳೂರ -ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನಾ ಪ್ರಾಧಿಕಾರದ ಶಾಖಾ ಕಚೇರಿಯನ್ನು ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಸ್ಥಾಪಿಸುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದು ಉಪ ಮುಖ್ಯಮಂತ್ರಿಗಳಾದ
ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಸ್ಯರಾದ ಮಧು ಜಿ ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಉಪ ಮುಖ್ಯಮಂತ್ರಿಗಳು,
ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನಾ ಪ್ರಾಧಿಕಾರ (ಬಿ.ಎಂ.ಐ.ಸಿ.ಎ.ಪಿ.ಎ) ವ್ಯಾಪ್ತಿಗೆ ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಗೆ 2001ನೇ ಸಾಲಿನಲ್ಲಿ ಸೇರ್ಪಡೆಯಾಗಿದೆ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಭೀಮಾ ಮುಖ್ಯ ನದಿಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ನೀರನ್ನು ಬಳಸಿಕೊಳ್ಳಲು ನಿರ್ಭಂದವಿದ್ದು, ಮಿತಿಗೊಳಿಸಿರುವ ಪ್ರಮಾಣದಲ್ಲಿ ಯೋಜನೆಗಳನ್ನು ರೂಪಿಸಲಾಗಿರುತ್ತದೆ. ಸಾಮಾನ್ಯ ವರ್ಷಗಳಲ್ಲಿ ನೀರಿನ ಕೊರತೆ ಕಂಡುಬಂದಿರುವುದಿಲ್ಲ. ಕೊರತೆಯಾದ ಜಲ ವರ್ಷಗಳಲ್ಲಿ ಕುಡಿಯುವ ಹಾಗೂ ಇತರೆ ಅಗತ್ಯಗಳಿಗೆ ನೀರನ್ನು ಮಹಾರಾಷ್ಟ್ರ ರಾಜ್ಯದಿಂದ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು, ಸದಸ್ಯರಾದ ಡಾ.ತಳವಾರ ಸಾಬಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ್ದಾರೆ.
ಬಚಾವತ್ ತೀರ್ಪಿನ ಪ್ರಕಾರ ನ್ಯಾಯಯುತವಾಗಿ ರಾಜ್ಯಕ್ಕೆ ಬರಬೇಕಾದ ನೀರನ್ನು ಪಡೆಯಲು ಸರ್ಕಾರ ಪ್ರಯತ್ನಿಸಿದೆ ಎಂದು ಅವರು ವಿವರಿಸಿದ್ದಾರೆ.