ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಿಂದ ಸಭೆ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮ ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ಅಧಿಕಾರಿಗಳು ಸರಿಯಾಗಿ ನಿಗಾವಹಿಸಬೇಕೆಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಶ್ರೀ ಮಕ್ರಂದ್ ಪಾಂಡುರಂಗ್ ರವರು ಸೂಚನೆ ನೀಡಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದು ಕುಮಾರ ಕೃಪಾ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಳ ಮೇಲೆ ಎಫ್.ಎಸ್.ಸಿ ತಂಡಗಳು ಸರಿಯಾಗಿ ನಿಗಾವಹಿಸುತ್ತಿರಬೇಕು. ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನಡೆಯುವ ಸಾಮಾವೇಶಗಳು, ಪ್ರಚಾರ ಕಾರ್ಯಗಳ ವೇಲೆ ವಿವಿಟಿ, ವಿಎಸ್‌ಟಿ ಹಾಗೂ ಎಫ್‌ಎಸ್‌ಟಿ ತಂಡಗಳು ಸರಿಯಾಗಿ ಮೇಲ್ವಿಚಾರಣೆ ಮಾಡಬೇಕು. ಚುನಾವಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಸುಗಮವಾಗಿ ನಡೆಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.
ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿಯು ದೃಶ್ಯ ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಮುದ್ರಣ ಮಾಧ್ಯಮಗಳ ಮೇಲೆ ಸರಿಯಾಗಿ ನಿಗಾವಹಿಸಿ ಯಾವುದೇ ವರದಿಯ ಕುರಿತು ಅನುಮಾನ ಬಂದಲ್ಲಿ ಕೂಡಲೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಸೂಚಿಸಿದರು.
ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಎಂಸಿಸಿ ನೋಡಲ್ ಅಧಿಕಾರಿಯಾದ ಮುನೀಶ್ ಮೌದ್ಗಿಲ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯಾದ ವಿನೋತ್ ಪ್ರಿಯಾ, ಎಂಸಿಎಂಸಿ ನೋಡಲ್ ಅಧಿಕಾರಿಯಾದ ಪ್ರೀತಿ ಗೆಹ್ಲೋಟ್, ಚುನಾವಣಾ ವೆಚ್ಚ ವೀಕ್ಷಕರಾದ ಸಂಗೀತಾ ಯಾದವ್, ಗೌತಮ್ ಸಿಂಗ್ ಚೌದರಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.