ಶ್ರೀಮದ್ ರಂಭಾಪುರಿ ವೀರ ರುದ್ರಮುನಿದೇವ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಜನ್ಮ ಶತಮಾನೋತ್ಸವ
Birth Centenary of Srimad Rambhapuri Veera Rudramunideva Rajadesikendra Shivacharya Bhagwatpada
ಬಾಳೆಹೊನ್ನೂರು : ಬಾಳೆಹೊನ್ನೂರಿನಲ್ಲಿಂದು ಶ್ರೀಮದ್ ರಂಭಾಪುರಿ ವೀರ ರುದ್ರಮುನಿದೇವ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಜನ್ಮ ಶತಮಾನೋತ್ಸವ ಸಮಾರಂಭವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಪವಿತ್ರ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಮತ್ತು ಶ್ರೀ ಕೇದಾರ ಕ್ಷೇತ್ರದ ಪರಮಪೂಜ್ಯ ಶ್ರೀ ಹಿಮವತ್ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ರಾವಲ್ ಪದವಿಭೂಷಿತ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್, ಶಾಸಕರುಗಳಾದ ಟಿ.ಡಿ.ರಾಜೇಗೌಡ, ಎಚ್.ಡಿ. ತಮ್ಮಣ್ಣ ಮತ್ತಿತರರು ಪಾಲ್ಗೊಂಡಿದ್ದರು.