ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸ್ ರವರ ಅರ್ಥಪೂರ್ಣ ಜನ್ಮದಿನಾಚರಣೆ
Birthday celebrations of former Prime Minister Rajiv Gandhi and former Chief Minister D Devaraja Aras
ಬೆಂಗಳೂರು : ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ರವರ ನೇತೃತ್ವದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ರವರ ಹಾಗೂ ಬಡವರ ಬಂಧು ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ರವರ ಜನ್ಮ ದಿನಾಚರಣೆಯನ್ನು ಶೇಷಾದ್ರಿಪುರ ಬಳಿ ಇರುವ ಕರ್ನಾಟಕ ಅಂದರ ಶಾಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ವೇಳೆ ಎಸ್ ಮನೋಹರ್ ರವರು ಮಾತನಾಡಿ ಮಾಜಿ ಪ್ರಧಾನಿಗಳಾದ ರಾಜೀವ್ ಗಾಂಧಿ ರವರು ದೇಶದ ಅಭಿವೃದ್ಧಿಗೆ 21ನೇ ಶತಮಾನದ ಏಳಿಗೆಗೆ ಅತ್ಯಂತ ಪ್ರಾಮಾಣಿಕತೆಯಿಂದ ಶ್ರಮಿಸಿದ ಮಹಾನ್ ನಾಯಕರು ರಾಜೀವ್ ಗಾಂಧಿ ಅವರ ಆಡಳಿತದಲ್ಲಿ ದೇಶದ ಯುವಕರು ಅತ್ಯಂತ ಉನ್ನತ ಮಟ್ಟದ ಸ್ಥಾನಗಳಿಗೆ ಅರ್ಹತೆಯನ್ನು ಗಳಿಸಿ ಮಾಹಿತಿ ತಂತ್ರಜ್ಞಾನದಲ್ಲಿ ಇಡೀ ವಿಶ್ವಕ್ಕೆ ಮಾದರಿಯಾದರು, ಇನ್ನು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ದೇವರಾಜ್ ಅರಸ್ ರವರು ತಮ್ಮ ಅವಧಿಯಲ್ಲಿ ಹಿಂದುಳಿದ ವರ್ಗಕ್ಕೆ ಹಾಗೂ ರೈತರಿಗೆ ನೀಡಿದ ಅಪಾರ ಕೊಡುಗೆಯನ್ನು ಕರ್ನಾಟಕ ರಾಜ್ಯದ ರೈತರು ಹಾಗೂ ಬಡವರ್ಗದವರು ಇಂದಿಗೂ ಸಹ ದೇವರಾಜ ಅರಸುರವರನ್ನ ಸ್ಮರಿಸುತ್ತಾರೆ, ಇಬ್ಬರು ನಾಯಕರು ದೇಶಕ್ಕೆ ಮತ್ತು ರಾಜ್ಯಕ್ಕೆ ಅತ್ಯಂತ ಮಾದರಿ ಆಡಳಿತ ನೀಡಿದ ಮಹನೀಯರ ಜನ್ಮದಿನವನ್ನು ಇಂದು ಅಂಧರ ಶಾಲೆಯಲ್ಲಿ ಆಚರಿಸಲಾಯಿತು ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಿ ಮೈಸೂರ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನ ಅಧ್ಯಕ್ಷರಾದ ಎಸ್.ಮನೋಹರ್, ರವರು ಬೆಂಗಳೂರು ಕೇಂದ್ರ ಪ್ರಚಾರ ಸಮಿತಿ ಅಧ್ಯಕ್ಷರಾದ ಜಿ ಪ್ರಕಾಶ್ ಕಾಂಗ್ರೆಸ್ ಮುಖಂಡರಾದ ರವಿಕುಮಾರ್, ಪುಟ್ಟರಾಜು, ಹೇಮರಾಜು, ಉಮೇಶ್, ನವೀನ್, ಜಿ. ಕುಮಾರ್, ಮಧು ಮತ್ತು ಸ್ನೇಹಿತರು ಉಪಸ್ಥಿತರಿದ್ದರು.