ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ ರೂ 2.04 ಲಕ್ಷ ಮೊತ್ತದ ಚೆಕ್ ವಿತರಣೆ
Check distribution of Rs 2.04 lakh each to the families of those who died in the building collapse disaster

ಬೆಂಗಳೂರು : ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಇತ್ತಿಚೆಗೆ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ 8 ಕಾರ್ಮಿಕರ ಕುಟುಂಬದವರಿಗೆ ತಲಾ ರೂ 2.04 ಲಕ್ಷ ಮೊತ್ತದ ಚೆಕ್ಕನ್ನು ವಿಕಾಸಸೌಧದಲ್ಲಿ
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ವಿತರಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ವಿ. ಪ್ರಸಾದ್, ಕಾರ್ಮಿಕ ಆಯುಕ್ತ ಗೋಪಾಲಕೃಷ್ಣ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ, ಉಪ ಕಾರ್ಯದರ್ಶಿ ಸಂಗಪ್ಪ ಉಪಾಸೆ, ಜಂಟಿ ಕಾರ್ಮಿಕ ಆಯುಕ್ತ ಜಾನ್ಸನ್ ಸೇರಿದಂತೆ ಉಪಸ್ಥಿತರಿದ್ದರು