ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಸನ್ನಿಹಿತ : ಬಿ.ಎಸ್ ಯಡಿಯೂರಪ್ಪ
Chief Minister Siddaramaiah's time to go home is imminent: BS Yeddyurappa
ಮೈಸೂರು: ಭ್ರಷ್ಟ ಸರ್ಕಾರ ಕಿತ್ತೋಗೆಯಲು ಪಾದಯಾತ್ರೆ ಮಾಡ್ತಾ ಇದ್ದೀವಿ. ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಚಾಮುಂಡೇಶ್ವರಿ ದರ್ಶನ ಪಡೆದು ನಂತರ ಸಿಎಂ ಸಿದ್ದರಾಮಯ್ಯ ಅವರ ಫೇವರೆಟ್ ಮೈಲಾರಿ ಹೋಟೆಲ್‌ನಲ್ಲಿ ದೋಸೆ ಸೇವಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಮೂರು ಲಕ್ಷಕ್ಕೂ ಅಧಿಕ ಜನ ನಮ್ಮ ಬೃಹತ್ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಪಾದಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ತಾ ಇದೆ ಎಂದರು.
ಇದೇ ವೇಳೆ ಯಡಿಯೂರಪ್ಪ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಎಸ್‌ವೈ, ಸಿದ್ದರಾಮಯ್ಯ ಅವರು ಹೇಳಬೇಕು ಪಾಪ. ಅವರು ನಿವೃತ್ತಿ ತಗೊಂಡು ಮನೆಗೆ ಹೋಗುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಯಾರು ನಿವೃತ್ತಿಯಾಗ್ತಾರೆ, ಏನ್ ಆಗ್ತಾರೆ ಅನ್ನೊದು ಮುಂದೆ ಗೊತ್ತಾಗುತ್ತದೆ. ಪೊಕ್ಸ್ ಕೇಸ್‌ನಲ್ಲಿ ನಾಳೆ ಕೋರ್ಟ್‌ನಲ್ಲಿ ತೀರ್ಮಾನ ಆದಾಗ ಎಲ್ಲಾ ಬಹಿರಂಗವಾಗುತ್ತೆ. ಅಲ್ಲಿಯವರೆಗೆ ನಾನು ಏನು ಮಾತಾಡಲ್ಲ. ಅದಾದ ಬಳಿಕ ಸಿದ್ದರಾಮಯ್ಯಗೆ ಉತ್ತರ ಸಿಗುತ್ತೆ. ಅವರು ಈಗ ಮನಬಂದಂತೆ ಮಾತಾಡುತ್ತಿದ್ದಾರೆ ಮಾತಾಡಲಿ. ಹತಾಶೆಯ ಮನೋಭಾವದಲ್ಲಿ ಇರೋದನ್ನು ಜನರೇ ತೀರ್ಮಾನ ಮಾಡ್ತಾರೆ ಎಂದರು.
ನಾನು ತಪ್ಪು ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರ ಸಂಬಂಧ ಮಾತನಾಡಿದ ಅವರು, ಸಿಎಂ ತಮ್ಮ ಪತ್ನಿಗೆ ಬೆಲೆಬಾಳುವ ಸೈಟ್‌ಗಳನ್ನು ಕೊಟ್ಟಿದ್ದಾರೆ. ಮನೆಯವರಿಗೆ ಬೆಲೆ ಬಾಳುವ ಸೈಟ್ ಕೊಟ್ಟ ಉದಾಹರಣೆ ಇದ್ಯಾ? ಇದು ಅಕ್ಷಮ್ಯ ಅಪರಾಧ, ಅದಕ್ಕಾಗಿ ಹೋರಾಟ ಮಾಡ್ತಿದ್ದೇವೆ ಎಂದು ಹೇಳಿದರು.