ಸಿ.ಎಂ. ಪರಿಹಾರ ನಿಧಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 5 ಕೋಟಿ ರೂ. ದೇಣಿಗ

ಸಿ.ಎಂ. ಪರಿಹಾರ ನಿಧಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 5 ಕೋಟಿ ರೂ. ದೇಣಿಗ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಪರಿಸ ಮಾಲಿನ್ಯದಿಂದ ಉಂಟಾಗುವ ಕ್ಯಾನ್ಸರ್, ಆಸ್ತಮಾ, ಹೃದ್ರೋಗ, ಮೂತ್ರಪಿಂಡ ತೊಂದರೆ ಹಾಗೂ ಮಾನಸಿಕ ಅಸ್ವಸ್ಥತೆಗೆ ಒಳಗಾಗುವ ಅಸಹಾಯಕರಿಗೆ ನೆರವಾಗಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ ನೀಡಿತು.
ಪರಿಸರ ಮಾಲಿನ್ಯದಿಂದ ತೊಂದರೆಗೆ ಒಳಗಾಗುವ ಅಸಹಾಯಕರಿಗೆ ನೆರವಾಗಲು ಜಲ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಕಾಯಿದೆ 1974ರ ಸೆಕ್ಷನ್ 37(2) ಅಡಿಯಲ್ಲಿ ಈ ದೇಣಿಗೆಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಝಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್,  ಪರಿಸರ ಇಲಾಖೆ ಪ್ರದಾನ ಕಾರ್ಯದರ್ಶಿ ಬಿ.ಪಿ. ರವಿ, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಬಾಲಚಂದ್ರ ಉಪಸ್ಥಿತರಿದ್ದರು.