ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ನೀಡುತ್ತಿರುವ 5 ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಕಪಿಸಿಸಿ ಪ್ರಧಾನ ಕಾರ್ಯದರ್ಶಿ, ಎಂ.ಇ.ಐ.ನಿಗಮದ ಅಧ್ಯಕ್ಷರಾದ ಎಸ್.ಮನೋಹರ್, ಮಾಜಿ ಬಿಬಿಎಂಪಿ ಸದಸ್ಯ ಉದಯ್ ಶಂಕರ್, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಆನಂದ್, ಪ್ರಕಾಶ್, ಹೇಮರಾಜ್ ನಂದಕುಮಾರ್, ಚಂದ್ರುಶೇಖರ್, ಉಮೇಶ್, ರಂಜಿತ್, ಜಯಶ್ರೀ, ಪ್ರೇಮಲತಾ, ಪುಷ್ಪ, ಮಾಧವಿ, ಪುಟ್ಟರಾಜು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಎಸ್.ಮನೋಹರ್ ರವರು ಮಾತನಾಡಿ ಕಾಂಗ್ರೆಸ್ ಪಕ್ಷದ ಸರ್ಕಾರ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಚುನಾವಣೆ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು ಪೂರೈಸಿದ್ದಾರೆ.
ರಾಜ್ಯದ ಪ್ರತಿ ಕುಟುಂಬವು ಗ್ಯಾರಂಟಿ ಯೋಜನೆಯ ಅರ್ಹ ಫಲಾನುಭವಿಗಲಾಗಿದ್ದಾರೆ. ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಹಿಳೆಯ ಸ್ವಾಭಿಮಾನದ ಬದುಕು ಸಾಗಿಸಲು ಮನೆಯ ಯಾಜಮಾನಿಗೆ 2000ಸಾವಿರ, ಅನ್ನಭಾಗ್ಯ ಮತ್ತು ಮಹಿಳೆಯರಿಗೆ ಉಚಿತ ಬಸ್ , 200ಯೂನಿಟ್ ವಿದ್ಯುತ್ ಉಚಿತ ಯೋಜನೆಗಳು ಮಹಿಳೆಯರ ಸ್ವಾವಂಲಭಿ ಜೀವನಕ್ಕೆ ಅನುಕೂಲವಾಗಿದೆ.
ಆರ್ಥಿಕವಾಗಿ ದುರ್ಬಲರಾದ ಕುಟುಂಬಗಳು ಇಂದು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಜೆಡಿಎಸ್ ಪಕ್ಷದ ಗುರುತು ರೈತ ಮಹಿಳೆ ಮತ್ತು ಆನಿತಾ ಕುಮಾರಸ್ವಾಮಿ ಶಾಸಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅದರೆ ತುಮಕೂರು ಪ್ರಚಾರ ಸಮಯದಲ್ಲಿ ಮಹಿಳೆಯರ ಕುರಿತು ಕೀಳುಮಟ್ಟದ ಭಾಷೆ ಬಳಸಿರುವುದು ಶೋಚನಿಯ ಸಂಗತಿ. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿರವರು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಾಣುವ ಭೀತಿ ಇರುವುದರಿಂದ ಬಾಯಿಗೆ ಬಂದ್ದಂತೆ ಮಾತನಾಡುತ್ತಿದ್ದಾರೆ. ರಾಜ್ಯ ಮಹಿಳೆಯರು ತಕ್ಕ ಉತ್ತರ ನೀಡಬೇಕು ಇವರಿಗೆ ಪಾಠ ಕಲಿಸುವ ಸಮಯ ಬಂದಿದೆ ಎಂದು ಹೇಳಿದರು.