ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳ ಈಡೇರಿಸಲು ಆಗ್ರಹ : ಬಿ.ವೈ ವಿಜಯೇಂದ್ರ

ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳ ಈಡೇರಿಸಲು ಆಗ್ರಹ : ಬಿ.ವೈ ವಿಜಯೇಂದ್ರ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಳಗಾವಿ: ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಪ್ರತಿಭಟನಾ ಧರಣಿ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ  ಬಿ.ವೈ ವಿಜಯೇಂದ್ರ ರವರು ಭೇಟಿ ನೀಡಿ ಉಪನ್ಯಾಸಕರ ಅಹವಾಲು ಸ್ವೀಕರಿಸಿದರು.

ಈ ವೇಳೆ ಪ್ರತಿಭಟನೆ ಉದ್ದೇಶಿಸಿ ಬಿ.ವೈ ವಿಜಯೇಂದ್ರ ರವರು ಮಾತನಾಡಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ, ಸೇವಾ ಅನುಭವ ಹೊಂದಿರುವ ಅತಿಥಿ ಉಪನ್ಯಾಸಕರನ್ನು ಕೈ ಬಿಡುತ್ತಿರುವುದು ಸೇರಿದಂತೆ ಅತಿಥಿ ಉಪನ್ಯಾಸಕರ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನಿಲುವುಗಳನ್ನು ಖಂಡಿಸಿ ಉಪನ್ಯಾಸ ಬಂಧುಗಳ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರವು ಈಡೇರಿಸಬೇಕು ಎಂದು ಅಗ್ರಹಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ , ಯುವ ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಧೀರಜ್ ಮುನಿರಾಜು, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಹರೀಶ್ ಪೂಂಜಾ, ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್, ಸೇರಿದಂತೆ ಪಕ್ಷದ ಮುಖಂಡರು, ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.