ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ
Deputy Chief Minister DK Shivakumar is conducting meeting regarding disaster management
ಬೆಂಗಳೂರು : ನಗರದಲ್ಲಿ ವಿಪತ್ತು ನಿರ್ವಹಣೆ ಹಾಗೂ ಇನ್ನಿತರೆ ವಿಷಯಗಳಿಗೆ ಸಂಬಂಧಿಸಿದಂತೆ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ಬಿಬಿಎಂಪಿ ಹಾಗೂ ಇತರೆ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-೦1 ರಲ್ಲಿ ಸಭೆ ನಡೆಸಿದರು.
ಈ ವೇಳೆ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬಿಡಿಎ ಆಯುಕ್ತರಾದ ಜಯರಾಮ್, ಜಲಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದ ರಾಮ್ ಪ್ರಸಾತ್ ಮನೋಹರ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ಎಲ್ಲಾ ವಲಯ ಆಯುಕ್ತರು, ಎಲ್ಲಾ ವಲಯ ಜಂಟಿ ಆಯುಕ್ತರು, ಪ್ರಧಾನ ಅಭಿಯಂತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.