ಮೈತ್ರಿಕೂಟದ ಅಂಗಪಕ್ಷಗಳ ಕರ್ನಾಟಕ ಘಟಕದ ಮುಖಂಡರ ಜತೆ ಡಿಕೆಶಿ ಸಭೆ

ಮೈತ್ರಿಕೂಟದ ಅಂಗಪಕ್ಷಗಳ ಕರ್ನಾಟಕ ಘಟಕದ ಮುಖಂಡರ ಜತೆ ಡಿಕೆಶಿ ಸಭೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂಡಿಯಾ (INDIA) ಮೈತ್ರಿಕೂಟದ ಅಂಗಪಕ್ಷಗಳ ಕರ್ನಾಟಕ ಘಟಕದ ಮುಖಂಡರ ಜತೆ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸಮಾಲೋಚನೆ ನಡೆಸಿದರು. ಸಚಿವ ಡಾ ಎಂ ಸಿ ಸುಧಾಕರ್, ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, ಸಹ ಅಧ್ಯಕ್ಷರಾದ ಐಶ್ವರ್ಯ ಮಹದೇವ್, ಆಪ್ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಪೃಥ್ವಿರೆಡ್ಡಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಬಸವರಾಜು, ಎನ್ ಸಿಪಿ ರಾಜ್ಯಾಧ್ಯಕ್ಷ ಸಿ ಎಸ್ ಇನಾಂದಾರ್, ಸಿಪಿಐ ಎಂಎಲ್ ಪ್ರಧಾನ ಕಾರ್ಯದರ್ಶಿ ಕ್ಲಿಪ್ಟನ್ ಡಿ ರೊಜೆರಿಯೋ, ರಾಷ್ಟ್ರೀಯ ಜನತಾದಳ ರಾಜ್ಯಾಧ್ಯಕ್ಷ ಯಾಕುಬ್ ಗುಲ್ವಾಡಿ, ಫಾರ್ವರ್ಡ್ ಬ್ಲಾಕ್ ರಾಜ್ಯಾಧ್ಯಕ್ಷ ಶಿವಶಂಕರ್ ಮತ್ತಿತರರು ಭಾಗವಹಿಸಿದ್ದರು.