ರಾಹುಲ್ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಲಿ: ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು: ದೇಶಾದ್ಯಂತ ಪಾದಯಾತ್ರೆ ಮಾಡಿ ಜನರ ಜ್ವಲಂತ ಸಮಸ್ಯೆ ಎತ್ತಿರೋ ರಾಹುಲ್ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಹುಲ್ ಗಾಂಧಿ ಅವರೇ ಪ್ರತಿಪಕ್ಷ ಆಗಲಿ ಅಂತ ನಮ್ಮೆಲ್ಲರ ಆಸೆ. ಇದನ್ನು ಇಂಡಿಯಾ ಒಕ್ಕೂಟ ತೀರ್ಮಾನಿಸಲಿದೆ. ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಮಾಡಿದ್ದಾರೆ. ಈ ಮೂಲಕ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿದ್ದಾರೆ. ಹೀಗಾಗಿ ಅವರೇ ಪ್ರತಿಪಕ್ಷ ನಾಯಕ ಆಗಲಿ ಅನ್ನೋದು ನಮ್ಮೆಲ್ಲರ ಬಯಕೆಯಾಗಿದೆ. ಇಂಡಿಯಾ ಕೂಟ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದು ಹೇಳಿದರು.
ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಹೆಸರು ಕೇಳಿ ಬರುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತನಿಖೆ ವೇಳೆ ಅನೇಕ ವಿಚಾರಗಳು ಬೆಳಕಿಗೆ ಬರುತ್ತವೆ. ತನಿಖೆಯಲ್ಲಿ ಹಲವರ ಹೆಸರುಗಳು ಹೊರಬರುತ್ತವೆ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಾರೆ. ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ. ಆದರೆ ಯಾರು ಏನೇ ಹೇಳಿದ್ರೂ ಅದನ್ನು ಪರಿಶೀಲಿಸಬೇಕಾಗುತ್ತದೆ ಎಂದು ತಿಳಿಸಿದರು. ಮೂವರನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರಮೋದಿ ಅವರು ನಾಳೆ ಪದಗ್ರಹಣ ಮಾಡುತ್ತಿರುವುದಕ್ಕೆ ಅಭಿನಂದಿಸಿದ್ದಾರೆ.