ಜನವರಿ 27, 2025 ರಂದು "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ.

EPS 95 KSRTC BMTC retired employees Union protest against EPFO

ಜನವರಿ 27, 2025 ರಂದು
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಜನವರಿ 27, 2025 ರಂದು "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ನಡೆಸಲಾಗುವುದು ಎಂದು ಈ ಪಿಎಸ್ 95 ಕೆಎಸ್ಆರ್ಟಿಸಿ ಬಿಎಂಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ನಂಜುಂಡೇಗೌಡ ರವರು ತಿಳಿಸಿದ್ದಾರೆ.

 ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ನಂಜುಂಡೇಗೌಡರವರು ಮಾತನಾಡಿ, ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗು ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ , ಚಿಕ್ಕಬಳ್ಳಾಪುರ ವತಿಯಿಂದ ಇಪಿಎಸ್ ಪಿಂಚಣಿದಾರರ ವಿನೂತನ ಪ್ರತಿಭಟನಾ ಸಭೆ ಹಾಗೂ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮವನ್ನು ಜನವರಿ 27, 2025 ರಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.

       ಮಹತ್ವದ ಬೆಳವಣಿಗೆಯಲ್ಲಿ ನಮ್ಮ ಮುಖಂಡರಾದ ಕಮಾಂಡರ್ ಅಶೋಕ್ ರಾವತ್, ವೀರೇಂದ್ರ ಸಿಂಗ್ ರಜಾವತ್, ರಮಕಾಂತ್ ನರಗುಂದ, ಪಿ ಏನ್ ಪಾಟೀಲ್ ಹಾಗೂ ರಾಜೀವ್ ಭಟ್ನಾಕರ್ ರವರ ನಿಯೋಗವು ನವದೆಹಲಿಯಲ್ಲಿ, ಶ್ರೀಮತಿ ನಿರ್ಮಲಾ ಸೀತಾರಾಮನ್ ವಿತ್ತ ಸಚಿವರು, ಕೇಂದ್ರ ಕಾರ್ಮಿಕ ಹಾಗು ಉದ್ಯೋಗ ಖಾತೆಯ(minister for labour & employment) ಸಚಿವರಾದ ಮನ್ಸೂಖ್ ಮಾಂಡವೀಯ ಹಾಗೂ ಇಪಿಎಫ್ಓ ಉನ್ನತ ಮಟ್ಟದ ಅಧಿಕಾರಿಗಳನ್ನು ಭೇಟಿ ಮಾಡಿ, ಇಪಿಎಸ್ ನಿವೃತ್ತರ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಅಧಿಕ ಪಿಂಚಣಿಗೆ ಸಂಬಂಧಿಸಿದಂತೆ ಚರ್ಚಿಸಿದ ಪರಿಣಾಮ, ಈ ಎರಡೂ ಅಂಶಗಳು ಕ್ಲೈಮ್ಯಾಕ್ಸ್ (claimax) ಅಂತ ತಲುಪಿದ್ದು, ಇದೇ ಫೆಬ್ರವರಿ 01, 2025 ರಿಂದ ಪ್ರಾರಂಭವಾಗುವ ಕೇಂದ್ರ ಬಜೆಟ್ ಅಧಿವೇಶನದಲ್ಲಿ ಇತ್ಯರ್ಥವಾಗುವ ಸಂಭವ ನಿಚ್ಚಳವಾಗಿದೆ. ಇಂತಹ ಸಂದರ್ಭದಲ್ಲಿ ನಾವು ಕೈಕಟ್ಟಿ ಕೂರುವಂತಿಲ್ಲ, ಸ್ವಲ್ಪ ಎಚ್ಚರ ತಪ್ಪಿದರೂ ಇಪಿಎಫ್ಓ ಅಧಿಕಾರಿಗಳು ಸಮಯ ಸಾಧಕರಾಗುತ್ತಾರೆ. ಏನೇ ಆಗಲಿ, ಪತ್ರಿಕೆ ಹಾಗೂ ಟಿವಿ ಮಾಧ್ಯಮಗಳ ಮೂಲಕ ನಮ್ಮ ಕೂಗು ನವ ದೆಹಲಿಗೆ ತಲುಪಬೇಕು, ಅದಕ್ಕಾಗಿ ಈ ಶಾಂತಿಯುತ ಪ್ರತಿಭಟನೆ ನಡೆಯುತ್ತಿದೆ. ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯಸ್ಥರಾದ ಕಮಾಂಡರ್ ಶ್ರೀ ಅಶೋಕ್ ರಾಹುತ್ ರವರು ಕರೆ ನೀಡಿ, ಶಾಂತಿಯುತ ಪ್ರತಿಭಟನೆ ನಿವೃತ್ತರ ಆಜನ್ಮ ಸಿದ್ಧ ಹಕ್ಕು ಎಂದಿರುತ್ತಾರೆ.

       ಇಪಿಎಫ್ಓ ಅಧಿಕಾರಿಗಳು ಕಳೆದ ಎರಡು ವರ್ಷಗಳಿಂದ ಗಾಡ ನಿದ್ರೆಯಲ್ಲಿದ್ದು, ಇದ್ದಕ್ಕಿದ್ದಂತೆಯೇ ಪ್ರಕಟಣೆ ಹೊರಡಿಸಿ, ನೌಕರರ ಎಲ್ಲಾ ಸೇವಾ ವಿವರಗಳನ್ನು ಉದ್ಯೋಗದಾತರ ಮೂಲಕ ಜನವರಿ 31ರ ಒಳಗೆ ನೀಡಬೇಕೆಂದು ತಿಳಿಸಿದ್ದು, ಆದರೆ ಅಧಿಕಾರಿಗಳು ನೌಕರರು ಹಾಗೂ ಉದ್ಯೋಗದಾತರ ಮಧ್ಯೆ ಸೇತುವೆಯಂತೆ ಕೆಲಸ ಮಾಡಿ, ವಿವರಗಳನ್ನು ಪಡೆಯುತ್ತಿಲ್ಲ, ಆದರೆ ಪತ್ರಿಕಾ ಪ್ರಕಟಣೆ ಹೊರಡಿಸಿ, ಜನವರಿ 27, 2025 ರಂದು "ನಿಧಿ ಆಪ್ಕೆ ನಿಕಟ್" ಕಾರ್ಯಕ್ರಮವನ್ನು ದೇಶಾದ್ಯಂತ ನಡೆಸಿ, ನಿವೃತ್ತರ ಎಲ್ಲಾ ಕುಂದು ಕೊರತೆಗಳನ್ನು ಬಗೆಹರಿಸಿಕೊಡುತ್ತೇವೆ ಎಂದು ಪ್ರಚೂರಪಡಿಸಿದ್ದು, ಅದರಂತೆ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಿ ಕೊಡುವಂತೆ 20ನೇ ಮನವಿ ಪತ್ರವನ್ನು ಸಲ್ಲಿಸಲಾಗುವುದು. ನಮ್ಮ ಹಿಂದಿನ ಎಲ್ಲಾ ಮನವಿ ಪತ್ರಗಳಿಗೆ ಸಂಬಂಧಿಸಿದಂತೆ, ಇಪಿಎಫ್ಓ ಅಧಿಕಾರಿಗಳು ಉತ್ತರಿಸಬೇಕಾಗುತ್ತದೆ. ಏನೇ ಆಗಲಿ ಯಾರು ಧೃತಿಗೆಡಬಾರದು.

ಕೇಂದ್ರ ಸರ್ಕಾರ ಹಾಗೂ ಇಪಿಎಫ್ಓ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು, ಇಪಿಎಸ್ ನಿವೃತ್ತರ ಎಲ್ಲಾ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು. 

    ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯ ಸಂಯೋಜಕರಾದ ರಮಾಕಾಂತ ನರಗುಂದ ಹಾಗೂ ರಾಜ್ಯಾಧ್ಯಕ್ಷರಾದ ಜಿಎಸ್ಎಂ ಸ್ವಾಮಿ ಹಾಗೂ ನಮ್ಮ ಸಂಘದ ಮುಖಂಡರು, ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳ ಎಲ್ಲಾ ಇಪಿಎಸ್ ನಿವೃತ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಮುಖಂಡರು ನಮ್ಮ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಪ್ರಸ್ತುತಪಡಿಸಲಿದ್ದಾರೆ.

          ಇಪಿಎಸ್ ನಿವೃತ್ತರ ಈ ಎಲ್ಲಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜನವರಿ 27, 2025 ರಂದು ಬೆಳಿಗ್ಗೆ 11:00 ಗಂಟೆಗೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗುವ ಶಾಂತಿಯುತ ಪ್ರತಿಭಟನೆ ಹಾಗೂ ಅಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದ ಸಚಿವರುಗಳಿಗೆ ಮನವಿ ಪತ್ರವನ್ನು ಸಲ್ಲಿಸುವ ಸಭೆಗೆ ಎಲ್ಲ ಇಪಿಎಸ್ ನಿವೃತ್ತರು ಆಗಮಿಸಿ, ಭಾಗವಹಿಸಬೇಕೆಂದು ವಿನಂತಿಸಿಕೊಳ್ಳುತ್ತೇವೆ ಎಂದರು.