ಮತದಾರರಿಗೆ ಧನ್ಯವಾದ ಅರ್ಪಿಸಿದ ಈಶ್ವರಖಂಡ್ರೆ

ಬೀದರ್: ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಸುಮಾರು ಶೇ.66ರಷ್ಟು ಮತ ಚಲಾಯಿಸಿರುವ ಎಲ್ಲ ಮತದಾರರಿಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ.
ಬೀದರ್ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತು ಗುಲ್ಬರ್ಗ ಜಿಲ್ಲೆಯ ಎರಡು ಕ್ಷೇತ್ರಗಳಾದ ಆಳಂದ ಮತ್ತು ಚಿಂಚೋಳಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ನಿರ್ಭೀತಿಯಿಂದ ಮತ್ತು ನ್ಯಾಯಸಮ್ಮತವಾಗಿ ಮತ ಚಲಾಯಿಸಿರುವ ಎಲ್ಲ ಮತದಾರರೂ ಅದರಲ್ಲೂ ಮಹಿಳೆಯರಿಗೆ ಮತ್ತು ಪ್ರಥಮ ಬಾರಿ ಮತ ಹಾಕಿದ ಯುವಕರು ಅಭಿನಂದನಾರ್ಹರು ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.
Advertisement
ಜಾಹೀರಾತಿಗಾಗಿ ಸಂಪರ್ಕಿಸಿ 6362546216
ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಾಗರ್ ಖಂಡ್ರೆ ಅವರನ್ನು ಗೆಲ್ಲಿಸಲು ಬಿಸಿಲನ್ನೂ ಲೆಕ್ಕಿಸದೆ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಮಾಡಿದ ಸಚಿವರು, ಶಾಸಕರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಕಾಂಗ್ರೆಸ್ ನ ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಈಶ್ವರ ಖಂಡ್ರೆ ಕೃತಜ್ಞತೆ ಸಲ್ಲಿಸಿದ್ದಾರೆ.
ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಿಭಾಯಿಸಿದ ಜಿಲ್ಲಾಡಳಿತ, ಕಾನೂನು ಸುವ್ಯವಸ್ಥೆಯನ್ನು ಕಾಪಾಡಿದ ಜಿಲ್ಲಾ ಪೊಲೀಸರು, ಮೀಸಲು ಪೊಲೀಸ್ ಪಡೆ, ಗೃಹ ರಕ್ಷಕ ದಳ ಹಾಗೂ ಮತಗಟ್ಟೆಗಳಲ್ಲಿ ಶ್ರಮಿಸಿದ ಎಲ್ಲ ಸಿಬ್ಬಂದಿಗೂ ಈಶ್ವರ ಖಂಡ್ರೆ ಅವರು ಧನ್ಯವಾದ ಸಲ್ಲಿಸಿದ್ದಾರೆ.