ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ
Garlanding of statue of Gandhiji as part of Quit India Movement Day
ಬೆಂಗಳೂರು: ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಬಿಬಿಎಂಪಿ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು..
ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ದೀಪಿಕಾ ಶ್ರೀಕಾಂತ್ ರವರಿಂದ ವೈಷ್ಣವ ಜನತೋ, ಹಡ್ಸನ್ ಚರ್ಚಿನ ಫಾದರ್ ರೆವೆರೆಂಡ್ ಆಲ್ಫ್ರೆಡ್ ಸುದರ್ಶನ್ ಮತ್ತು ತಂಡದಿಂದ ಬೈಬಲ್ ವಾಚನ, ಗುರುದ್ವಾರದ ಶ್ರೀ ಗುರುಸಿಂಗ್ ಸಭಾ ಮತ್ತು ತಂಡದವರಿಂದ ಗುರು ಗ್ರಂಥ ವಾಚನ, ಮೌಲ್ವಿ ಹಫೀಜ್ ಶಾಬೀರ್ ಹುಸೇನ್ ರವರಿಂದ ಖುರಾನಿನ ವಾಚನ ಮಾಡಲಾಯಿತು.
ಈ ವೇಳೆ ವಿಶೇಷ ಆಯುಕ್ತರು(ಘನತ್ಯಾಜ್ಯ) ಹರೀಶ್ ಕುಮಾರ್, ವಲಯ ಆಯುಕ್ತರು (ಪೂರ್ವ) ಸ್ನೇಹಾಲ್, ಮುಖ್ಯ ಅಭಿಯಂತರರಾದ ಪ್ರಹ್ಲಾದ್, ವಲಯ ಜಂಟಿ ಆಯುಕ್ತರಾದ ಸರೋಜಾ, ಜಂಟಿ ಆಯುಕ್ತರು (ಕಂದಾಯ) ಲಕ್ಷ್ಮಿ ದೇವಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.