ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ
Guidelines from Union Ministry of Health
ನವದೆಹಲಿ: ವೈದ್ಯಕೀಯ ಸಿಬ್ಬಂದಿ ಮೇಲಿನ ಹೆಚ್ಚುತ್ತಿರುವ ಹಲ್ಲೆ ಪ್ರಕರಣ- ಕ್ಕೆ ಸಂಬಂಧಿಸಿ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿಂ- ಯನ್ನು ಪ್ರಕಟಣೆ ಮಾಡಲಾಗಿದೆ.
ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ನಡೆದ ನಂತರ ಇದೀಗ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಕೇಂದ್ರದ ಅಧೀನದಲ್ಲಿರುವ ಸಂಸ್ಥೆಗಳಿಗೆ ಮಾರ್ಗಸೂಚಿ ಅನ್ವಯಿಸುತ್ತದೆ. ಈ ವೈದ್ಯರ ಮೇಲೆ ಹಲ್ಲೆ ನಡೆಸಿದರೆ ತೆಗೆದುಕೊಳ್ಳಬಹುದಾದ ಕ್ರಮಗಳ ಫಲಕ ಅಳವಡಿಸಬೇಕು. ಆಸ್ಪತ್ರೆಗಳಲ್ಲಿ ಕಾನೂನು ಕ್ರಮಗಳ ಕುರಿತು ಫಲಕ ಹಾಕಬೇಕು. ಆಸ್ಪತ್ರೆಯ ಪ್ರಮುಖ ಪ್ರದೇಶಗಳಲ್ಲಿ ಗುಣಮಟ್ಟದ ಸಿಸಿಟಿವಿ ಕ್ಯಾಮರ ಅಳವಡಿಸಬೇಕು. ಸಿಸಿಟಿವಿ ಕಂಟ್ರೋಲ್ ರೂಂ ಸ್ಥಾಪಿಸಬೇಕು. ದಿನದ 24 ಗಂಟೆಗಳು ಮಾನಿಟರ್ ಮಾಡಬೇಕು.
ಸೂಕ್ತ ತರಬೇತಿ ಹೊಂದಿದ ಭದ್ರತಾ ಸಿಬ್ಬಂದಿಯನ್ನು ನೇಮಿಸಬೇಕು. ಆಸ್ಪತ್ರೆಯ ಪ್ರಮುಖ ಪ್ರದೇಶಗಳಲ್ಲಿ ಐಡಿಕಾರ್ಡ್ ತಪಾಸಣೆ ಮಾಡಬೇಕು. ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ಹೇರಬೇಕು. ರೋಗಿಯ ಜೊತೆ ಒಬ್ಬರು ಅಥವಾ ಇಬ್ಬರಿಗೆ ಇರಲು ಅವಕಾಶ ಇರಬೇಕು. ಅಣಕು ಪ್ರದರ್ಶನದ ಮೂಲಕ ಆಗಾಗ ಸಿಬ್ಬಂದಿಗಳಲ್ಲಿ ಜಾಗೃತಿ ಮೂಡಿಸಬೇಕು. ತುರ್ತು ಪರಿಸ್ಥಿತಿ ನಿಭಾಯಿಸುವ ಬಗ್ಗೆ ವೈದ್ಯರು ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಬೇಕು. ರಾತ್ರಿ ಪಾಳಿಯಲ್ಲಿ ಮಹಿಳಾ ಸಿಬ್ಬಂದಿಗೆ ಅಗತ್ಯ ರಕ್ಷಣೆ ನೀಡಬೇಕು ಎಂಬ ಮಾರ್ಗಸೂಚಿ ಪ್ರಕಟಿಸಿದೆ.