ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ರವರ ಆಶೀರ್ವಾದ ಪಡೆದ ಎಚ್ ಡಿ ಕೆ
ಬೆಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ|| ಶ್ರೀ ಶ್ರೀ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ದರ್ಶನ ಭಾಗ್ಯ ಇಂದು ನನ್ನ ಮನೆಯಲ್ಲಿಯೇ ದೊರೆತಿದ್ದು ನನ್ನ ಭಾಗ್ಯವೇ ಸರಿ ಎಂದು ಎಚ್ ಡಿ ಕುಮಾರಸ್ವಾಮಿ ರವರು ಹೇಳಿದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ|| ಶ್ರೀ ಶ್ರೀ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ರವರ ಆಶೀರ್ವಾದ ಪಡೆದ ಸಂದರ್ಭದಲ್ಲಿ ಮಾತನಾಡಿದ ಅವರು ಇತ್ತೀಚೆಗೆ ನಾನು 3ನೇ ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರ ಬಗ್ಗೆ ಹಾಗೂ ನನ್ನ ಆರೋಗ್ಯದ ಕುರಿತಾಗಿ ಪರಮಪೂಜ್ಯರು ವಿಚಾರಿಸಿ ಆಶೀರ್ವದಿಸಿದರು. ಅವರ ಅನುಗ್ರಹ, ವಾತ್ಸಲ್ಯಕ್ಕೆ ನಾನು ಆಭಾರಿ ಎಂದರು.
ಈ ಸಂದರ್ಭದಲ್ಲಿ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು ಜೆಡಿಎಸ್ ಪಕ್ಷದ ಅನೇಕ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.