ಮಾಜಿ ರಾಜ್ಯಪಾಲರಾದ ದಿ|| ಬಿ.ರಾಚಯ್ಯ ಅವರ ಸ್ಮಾರಕ ಉದ್ಘಾಟನೆ

Inauguration of former governor B. Rachaiah's memorial

ಮಾಜಿ ರಾಜ್ಯಪಾಲರಾದ ದಿ|| ಬಿ.ರಾಚಯ್ಯ ಅವರ ಸ್ಮಾರಕ ಉದ್ಘಾಟನೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ರಾಜ್ಯಪಾಲ ದಿ|| ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿದರು. ಚಾಮರಾಜನಗರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಲೂರು ಗ್ರಾಮದಲ್ಲಿ ಸ್ಮಾರಕ ಭವನ ನಿರ್ಮಿಸಲಾಗಿದೆ. 
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಾನೂನು ಸಚಿವ ಎಚ್.ಕೆ.ಪಾಟೀಲ್, ಸಂಸದರಾದ ಸುನಿಲ್ ಬೋಸ್, ಶಾಸಕರುಗಳಾದ ಎ.ಆರ್.ಕೃಷ್ಣಮೂರ್ತಿ, ಹೆಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.