ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಆಗಸ್ಟ್‌ ತಿಂಗಳಿಡಿ ಸ್ವಾತಂತ್ರ್ಯ ದಿನದ ಸಂಭ್ರಮ: ಪ್ರಿಯಾಂಕ್‌ ಖರ್ಗೆ

Independence Day Celebration in All Gram Panchayat Awareness Centers of the State in August month: Priyank Kharge

ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಆಗಸ್ಟ್‌ ತಿಂಗಳಿಡಿ ಸ್ವಾತಂತ್ರ್ಯ ದಿನದ ಸಂಭ್ರಮ: ಪ್ರಿಯಾಂಕ್‌ ಖರ್ಗೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ́ಓದುವ ಬೆಳಕುʼ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ ಮಾಹೆಯಿಡಿ 'ಭಾರತ ಸ್ವಾತಂತ್ರ್ಯ ದಿನಾಚರಣೆ' ಸಂಭ್ರಮೋತ್ಸವವನ್ನು ಆಯೋಜಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ಭೇಟಿ ನೀಡುವ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದಂತೆ ಪ್ರತಿ ದಿನ ಒಂದೊಂದು೩ ಘಟನೆ ಅಥವಾ ಸ್ವಾತಂತ್ರ ಹೋರಾಟಗಾರರ ಬಗ್ಗೆ'ಮಕ್ಕಳಿಗಾಗಿ ಗಾಂಧಿ', ಸ್ವರಾಜ್ಯದ ಕಥೆ' ಇನ್ನಿತರ ಸ್ವಾತಂತ್ರ್ಯದ ಪುಸ್ತಕಗಳನ್ನು ಬಳಸಿ 'ಗಟ್ಟಿ ಓದು' ಮಾಡಿಸುವುದು, ಗುಂಪು ಚರ್ಚೆ, ಭಾಷಣ ಕಾರ್ಯಕ್ರಮ, ಪ್ರಬಂಧ ಸ್ಪರ್ಧೆ ಏರ್ಪಾಟು ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆಯಲ್ಲದೆ, ಆಗಸ್ಟ್ ತಿಂಗಳಿನಲ್ಲಿ ಗ್ರಂಥಾಲಯಕ್ಕೆ ಬರುವ ಎಲ್ಲಾ ಮಕ್ಕಳಿಗೂ ತ್ರಿವರ್ಣ ಧ್ವಜ ಮತ್ತು ಬ್ಯಾಡ್ಜ್ ತಯಾರಿಸಲು ತಿಳಿಸಲು ಗ್ರಂಥಾಲಯ,ಗಳ ಮೇಲ್ವಿಚಾರಕರಿಗೆ ತಿಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಮಾಹಿತಿ ನೀಡಿದ್ದಾರೆ. 

ಸಂವಿಧಾನದ ಮೂಲ ಆಶಯಗಳ ಬಗ್ಗೆ ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಅರಿವು ಮೂಡಿಸಲು ಭಾರತ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಲು ಪ್ರೇರೇಪಿಸುವುದು, ಸ್ವಾತಂತ್ರ್ಯ ದಿನದ ಹಾಡುಗಳು ಹಾಗೂ ದೇಶಭಕ್ತಿ ಗೀತೆಗಳನ್ನು ಅಭ್ಯಾಸ ಮಾಡಲು ಮಕ್ಕಳನ್ನು ಒಟ್ಟುಗೂಡಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. 

ಭಾರತ ಚಳವಳಿಗೆ ಕೊಡುಗೆ ನೀಡಿದ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಥಳೀಯ ಹಿರಿಯರು, ಶಾಲಾ ಶಿಕ್ಷಕರ ಮೂಲಕ ಮಕ್ಕಳಿಗೆ ಪರಿಚಯಿಸುವುದು, ದೇಶಭಕ್ತಿ, ಸಾಮಾಜಿಕ ಕಾಳಜಿಯುಳ್ಳ ದೇಶಭಕ್ತರ ಚಲನಚಿತ್ರಗಳನ್ನು8 ಪ್ರದರ್ಶಿಸಲು ಕ್ರಮ ವಹಿಸಬೇಕು ಎಂದೂ ಗ್ರಾಮ ಪಂಚಾಯತಿಗಳಿಗೆ ತಿಳಿಸಲಾಗಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.