ನಾಳೆ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ

ನಾಳೆ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ವೇಜ್ ಟಿ-20 ವಿಶ್ವಕಪ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ ನ್ಯೂಯಾರ್ಕ್‌ ನಸ್ಸ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. 

ಈ ಉಭಯ ತಂಡ ಅಟ ನೋಡಲು ಕ್ರಿಕೆಟ್ ಪ್ರೇಮಿಗಳು ಎದುರು ನೋಡುತ್ತಿದ್ದಾರೆ ಹಾಗೂ ಭಾರತ ಜಯಗಳಿಸಲಿ ಎಂದು ಪೂಜೆ-ಹೋಮ ಸಹ ಮಾಡುತ್ತಿದ್ದಾರೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಶುರುವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಸೂಪರ್-8 ಹಂತಕ್ಕೇರುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ. ಏಕೆಂದರೆ ಭಾರತ ತಂಡದ ಮುಂದಿನ ಪಂದ್ಯಗಳಿರುವುದು ಯುಎಸ್‌ಎ ಮತ್ತು ಕೆನಡಾ ತಂಡಗಳ ವಿರುದ್ಧ. ಈ ಪಂದ್ಯಗಳಲ್ಲಿ ಭಾರತ ತಂಡದ ಗೆಲುವನ್ನು ಎದುರು ನೋಡಬಹುದು. ಹೀಗಾಗಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಭಾರತ ಟಿ-20 ವಿಶ್ವಕಪ್‌ನ ಮುಂದಿನ ಹಂತಕ್ಕೇರುವುದನ್ನು ಖಚಿತಪಡಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ. 

ಈ ಮಹತ್ವದ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರಾ ಎಂಬ ಚಿಂತೆಯೊಂದು ಶುರುವಾಗಿತ್ತು. ಏಕೆಂದರೆ ಐರ್ಲೆಂಡ್ ವಿರುದ್ಧದ ಪಂದ್ಯದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಬ್ಯಾಟಿಂಗ್‌ ವೇಳೆ ಭುಜ ಭಾಗಕ್ಕೆ ಚೆಂಡು ಬಡಿದಿದ್ದರಿಂದ ಹಿಟ್‌ಮ್ಯಾನ್ ಅರ್ಧದಲ್ಲೇ ಮೈದಾನ ತೊರೆದಿದ್ದರು. ಈ ಪಂದ್ಯದ ಬಳಿಕ ಅವರು ಅಭ್ಯಾಸದಲ್ಲೂ ಕಾಣಿಸಿಕೊಂಡಿರಲಿಲ್ಲ. ಆದರೆ ಶುಕ್ರವಾರ ನಡೆದ ಅಭ್ಯಾಸ ಶಿಬಿರದಲ್ಲಿ ಹಿಟ್‌ಮ್ಯಾನ್ ಮತ್ತೆ ಕಾಣಿಸಿಕೊಂಡಿದ್ದಾರೆ. ಅಲ್ಲದೆ ನೆಟ್ಸ್‌ ನಲ್ಲೂ ಬ್ಯಾಟಿಂಗ್ ಪ್ರಾಕ್ಟಿಸ್ ಮಾಡಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ಚೇತರಿಸಿಕೊಂಡಿರುವುದು ಖಚಿತವಾಗಿದೆ.

ಭಾರತ ಟಿ-20 ವಿಶ್ವಕಪ್ ತಂಡ ರೋಹಿತ್ ಶರ್ಮಾ (ನಾಯಕ), ಪಾಂಡ್ಯ ಹಾರ್ದಿಕ್ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾ‌ರ್ ಯಾದವ್, ರಿಷಭ್ ಪಂತ್‌, ಸಂಜು ಸ್ಯಾಟ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲೀಪ್ ಯಾದವ್, ಯುಜೇಂದ್ರ ಚಹಲ್‌, ಅರ್ಷದೀಪ್ సింగా, ಮೊಹಮ್ಮದ್ ಸಿರಾಜ್, ಜಸ್‌ಪ್ರೀತ್ ಬುಮ್ರಾ. ಮೀಸಲು ಆಟಗಾರರು: ಶುಭೋಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.