ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಲು ಸೂಚನೆ : ಜಿಲ್ಲಾಧಿಕಾರಿ ಅಕ್ರಂ ಪಾಷ

Instruction to headmasters and staff to perform their duties properly: District Collector Akram Pasha

ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಲು ಸೂಚನೆ : ಜಿಲ್ಲಾಧಿಕಾರಿ ಅಕ್ರಂ ಪಾಷ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಕೋಲಾರ : ಜಿಲ್ಲೆಯಲ್ಲಿ ಇಷ್ಟೊಂದು ಫಲಿತಾಂಶ ಕುಂಠಿತ ಆಗಿರುವುದು ತುಂಬಾ ಬೇಸರದ ಸಂಗತಿ ಆದ್ದರಿಂದ ಮುಂದಿನ ದಿನಗಳಲ್ಲಿ ಮುಖ್ಯೋಪಾಧ್ಯಾಯರು ಹಾಗೂ ಅಲ್ಲಿನ ಸಿಬ್ಬಂದಿ ಸರಿಯಾಗಿ ಕರ್ತವ್ಯ ನಿರ್ವಹಿಸಿ ಕನಿ? ಮಟ್ಟದ ಪ್ರಯತ್ನಗಳನ್ನ ಮಾಡಬೇಕೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.
ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಕೋಲಾರ ಶಾಲಾ ಶಿಕ್ಷಣ ಇಲಾಖೆ 2024- 25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ವಿಶ್ಲೇಷಣೆ ಹಾಗೂ ಶೈಕ್ಷಣಿಕ ಕಾರ್ಯಗಾರನ್ನು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು.
ಪ್ರಾಸ್ತಾವಿಕ ಭಾಷೆಣದಲ್ಲಿ ಮಾತನಾಡಿದ ಡಿಡಿಪಿಐ ಕೃಷ್ಣಮೂರ್ತಿ ಹಿಂದಿನ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕೋಲಾರ ಜಿಲ್ಲೆ 20ನೇ ಸ್ಥಾನಕ್ಕೆ ಕುಸಿದಿರುವುದು ತುಂಬಾ ಬೇಸರದ ಸಂಗತಿ ಎಂದು ತಿಳಿಸಿದರು. ಪೊಲೀಸ್ ನಿಖಿಲ್ ಅವರು ಶಾಲೆಗಳ ವರಿಷ್ಠಾಧಿಕಾರಿಗಳಾದ ಮಾತನಾಡಿ ಸರ್ಕಾರಿ ದಾಖಲೆಗಳನ್ನು ಇ-ಖಾತೆ ಮೂಡಿಸಿರುವುದು ತುಂಬಾ ಖುಷಿ ವಿಚಾರ ಅಲ್ಲದೆ ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಹೇಳಿದರು. ಶಾಲೆಗಳಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳು ಹಾಗೂ ಹಿಂಸೆಗಳನ್ನು ತಡೆಯಲು ಪೊಲೀಸ್ ಇಲಾಖೆ ಸದಾಸಿದ್ಧವಾಗಿದೆ ಎಂದು ತಿಳಿಸಿದರು. ಅಷ್ಟೇ ಅಲ್ಲದೆ ಶಾಲೆಗಳಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸುವಂತೆ ಸಲಹೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಂಶುಪಾಲರು ಅನುದಾನ ಮತ್ತು ಅನುದಾನ ರಹಿತ ಮುಖ್ಯ ಶಿಕ್ಷಕರು ಸೇರಿದಂತೆ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು.