ಸ್ವಯಂಸೇವಕ ಸಂಘದ ಕೇಶವ ಕುಂಜ ಕಾರ್ಯಾಲಯಕ್ಕೆ ಜಗದೀಶ್ ಶೆಟ್ಟರ್ ಭೇಟಿ

ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ರವರು ಹುಬ್ಬಳ್ಳಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೇಶವ ಕುಂಜ ಕಾರ್ಯಾಲಯಕ್ಕೆ ತೆರಳಿ ಸಂಘದ ಹಿರಿಯರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರದೀಪ್ ಶೆಟ್ಟರ್ ಸೇರಿದಂತೆ ಪಕ್ಷದ ಮುಖಂಡರು, ಹಿರಿಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.