ನಟ ಚೇತನ್‌ಚಂದ್ರ ಮೇಲೆ ಹಲ್ಲೆ ಓರ್ವನ ಬಂಧನ
ಬೆಂಗಳೂರು: ಸ್ಯಾಂಡಲ್ವುಡ್ ನಟ ಚೇತನ್ ಚಂದ್ರ ಮೇಲೆ 20 ಜನರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕಗ್ಗಲಿಪುರ ಸಮೀಪ ನಡೆದಿದೆ. ನಿನ್ನೆ ತಾಯಂದಿರ ದಿನದ ಪ್ರಯುಕ್ತ ತಾಯಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಾಪಸ್ ಬರುವಾಗ ಚೇತನ್ ಚಂದ್ರ ಅವರ ಕಾರನ್ನು ಅಡ್ಡಗಟ್ಟಿ ದುಡ್ಡ ಕೀಳಲು ಮುಂದಾಗಿದ್ದಾರೆ. ಹಣ ಕೊಡೋದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿ ನಟ ಚೇತನ್‌ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಕಿಡಿಗೇಡಿಗಳು ಹೊಡೆದಿದ್ದಾರೆ. ಅವರ ಕಾರಿಗೂ ಹಾನಿ ಮಾಡಲಾಗಿದೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
Advertisement
ಜಾಹೀರಾತಿಗಾಗಿ ಸಂಪರ್ಕಿಸಿ 6362546216
ಇನ್ನು ಈ ಘಟನೆ ಯಾವ ರೀತಿ ನಡೆಯಿತು ಎಂದು ಇನ್‌ಸ್ಟಾಗ್ರಾಮ್ ಲೈವ್‌ನಲ್ಲಿ ಚೇತನ್ ಚಂದ್ರ ಅವರು ಮಾಹಿತಿ ನೀಡಿದ್ದಾರೆ. ಹಲ್ಲೆಗೆ ಒಳಗಾದ ಬಳಿಕ ಅವರು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಮೇರೆಗೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.