ಭಾರತ ರತ್ನ ಎಂ. ವಿಶ್ವೇಶ್ವರಯ್ಯ ಸಂರಕ್ಷಣಾ ಹಿತರಕ್ಷಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಬೆಂಗಳೂರು : 69 ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ, ಭಾರತ ರತ್ನ ಎಂ. ವಿಶ್ವೇಶ್ವರಯ್ಯ ಸಂರಕ್ಷಣಾ ಹಿತರಕ್ಷಣಾ ಸಮಿತಿ ವತಿಯಿಂದ ಗಿರಿನಗರದ ಬಿಡಿಎ ಅವಲಹಳ್ಳಿ ಉದ್ಯಾನವನದಲ್ಲಿ ಏರ್ಪಡಿಸಲಾಗಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ರವಿ ಸುಬ್ರಹ್ಮಣ್ಯ ಹಾಗೂ ಬಿಬಿಎಂಪಿ ಮಾಜಿ ಮಹಾಪೌರರಾದ ಎಂ ಲಕ್ಷ್ಮೀನಾರಾಯಣ್ ರವರು ಧ್ವಜಾರೋಹಣವನ್ನು ನೆರವೇರಿಸಿದರು.
ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು. ನಾಡು, ನುಡಿ, ಸಂಸ್ಕೃತಿಯ ರಕ್ಷಣೆಗೆ ಪಣ ತೊಡೋಣ ಎಂದು ಶಾಸಕ ರವಿ ಸುಬ್ರಹ್ಮಣ್ಯ ಹಾಗೂ ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಎಂ ಲಕ್ಷ್ಮೀನಾರಾಯಣ್ ರವರು ಕರೆ ನೀಡಿದರು.
ಈ ಸಂದರ್ಭದಲ್ಲಿ, ಕನ್ನಡ ಏಕೀಕರಣಕ್ಕಾಗಿ ಹೋರಾಡಿದ ಹಾಗೂ ನಾಡು ನುಡಿಗಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸಿ, ಸರ್ವರಿಗೂ ಕನ್ನಡ ರಾಜ್ಯೋತ್ಸವಕ್ಕೆ ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ, ಉಪ ಮಹಾ ಪೌರರಾದ ಲಕ್ಷ್ಮೀನಾರಾಯಣ, ಚಿತ್ರನಟ ಉಮೇಶ್, ಭೂಮಿಕಾ ಲಕ್ಷ್ಮೀನಾರಾಯಣ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.