ಕಾಲರಾ ನಿರ್ವಹಣೆ: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ ಕರೆಯುವಂತೆ ಎಎಪಿ ಆಗ್ರಹ

ಕಾಲರಾ ನಿರ್ವಹಣೆ: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ ಕರೆಯುವಂತೆ ಎಎಪಿ ಆಗ್ರಹ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ರಾಜ್ಯದಲ್ಲಿ ಕಾಲರಾ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ವಿಚಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಸಭೆ ಕರೆದು, ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಡಾ. ಸತೀಶ್ ಕುಮಾರ್ ಒತ್ತಾಯಿಸಿದರು. 

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 4 ವರ್ಷಗಳ ಕಾಲರಾ ಪ್ರಕರಣಗಳ ಅಂಕಿ ಅಂಶಗಳನ್ನು ನೋಡಿದರೆ ಪ್ರತಿವರ್ಷ ಕ್ರಮವಾಗಿ 30, 40, 48 ಪ್ರಕರಣಗಳು ದಾಖಲಾಗುತ್ತಿದ್ದವು, ಆದರೆ ಈ ವರ್ಷ 109 ಕಾಲರಾ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ 6-7 ಪ್ರಕರಣಗಳು ವರದಿಯಾಗಿವೆ ಎಂದರು.

ಕುಡಿಯುವ ಉದ್ದೇಶಕ್ಕೆ ಶೇಖರಿಸಿರುವ ನೀರು ಕೊನೆಯ ಹಂತ ತಲುಪಿದೆ. ಪೈಪ್‌ಗಳನ್ನು ಸರಿಯಾಗಿ ನಿರ್ವಹಣೇ ಮಾಡದೇ ಇರುವುದು, ಒಳಚರಂಡಿ ಮತ್ತು ಕುಡಿಯುವ ನೀರಿನ ಪೈಪ್‌ಲೈನ್‌ ಸಮೀಪವೇ ಇರುವುದು, ಅವು ಒಡೆದಾಗ ಕೊಳಚೆ ನೀರು ಕುಡಿಯುವ ನೀರನ್ನು ಸೇರುತ್ತಿದೆ. ಕುಡಿಯುವ ನೀರಿನ ಸಂಗ್ರಹಗಾರದಲ್ಲಿ ಇರುವ ಸ್ವಚ್ಛತೆಯ ಕೊರತೆಯೂ ಕೂಡ ಕಾಲರಾ ವಿಪರೀತವಾಗಿ ಹರಡಲು ಕಾರಣವಾಗಿದೆ.

ಕಳೆದ ಆರು ತಿಂಗಳಿನಿಂದಲೂ ಆಮ್ ಆದ್ಮಿ ಪಾರ್ಟಿ, ಬೆಂಗಳೂರಿನ ನೀರಿನ ಸಮಸ್ಯೆ ಬಗ್ಗೆ ಎಚ್ಚರಿಕೆ ನೀಡುತ್ತಲೇ ಬಂದಿದೆ. ನೀರಿನ ಸಮಸ್ಯೆಯನ್ನು ಸರಿಪಡಿಡುವುದನ್ನು ಬಿಟ್ಟು, ನೀರಿನ ವಿಚಾರದಲ್ಲೂ ಆಡಳಿತ ಮತ್ತು ವಿರೋಧ ಪಕ್ಷ ರಾಜಕೀಯ ಮಾಡಿಕೊಂಡು ಕಾಲ ಕಳೆಯುತ್ತಿವೆ ಎಂದರು. 

ಮುಂದಿನ ದಿನಗಳಲ್ಲಿ ಕಾಲರಾ ಪ್ರಕರಣಗಳು ಹೆಚ್ಚಾಗುವ ಆತಂಕವಿದೆ. ಕಾಲರಾ ಪ್ರಕರಣಗಳು ಕೂಡ ರಾಜಕೀಯ ಚರ್ಚೆಗೆ ಸೀಮಿತವಾಗಬಾರದು. ಸರ್ಕಾರ ಕೂಡಲೇ ಜಾಗೃತಿ ವಹಿಸಿ, ತಕ್ಷಣ ಸಭೆ ಕರೆದು, ಕಾಲರಾ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.