ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಿ: ಮುಖ್ಯ ಆಯುಕ್ತರು

Make all arrangements for state-level Independence Day celebrations: Chief Commissioner

ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಿ: ಮುಖ್ಯ ಆಯುಕ್ತರು
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಎಲ್ಲಾ ರೀತಿಯ ಸಕಲ-ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆ ಆಚರಿಸುವ ಸಂಬಂಧ ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸರಿಯಾಗಿ ಪೂರ್ವಾಭ್ಯಾಸ ಮಾಡಿಕೊಳ್ಳಬೇಕು. ಪೂರ್ವಾಭ್ಯಾಸ ಮಾಡುವ ವೇಳೆ ಅವರಿಗೆ ತಿಂಡಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿ ಮಾಡಲು ಸೂಚಿಸಿದರು.

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಆಸನಗಳ ವ್ಯವಸ್ಥೆ, ಯಾವ ದ್ವಾರಗಳಲ್ಲಿ ಯಾರಿಗೆ ಪ್ರವೇಶ ನೀಡಬೇಕು, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲದಂತೆ ನೋಡಿಕೊಳ್ಳಬೇಕೆಂದು ಸೂಚಿಸಲಾಯಿತು. 

ಮಾಣಿಕ್ ಷಾ ಆವರಣದಲ್ಲಿ ಸೂಕ್ತ ಬಂದೋಬಸ್ತ್ ಗಾಗಿ ಅವಶ್ಯಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿರಬೇಕು. ಬ್ಯಾರಿಕೇಡಿಂಗ್ ವ್ಯವಸ್ಥೆ ಸರಿಯಾಗಿದೆಬೇಕು. ಆವರಣ ಹಾಗೂ ಆವರಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡಬೇಕು ಎಂದು ತಿಳಿಸಿದರು. 

ಪ್ರಶಂಸಾ ಪತ್ರ ವಿತರಣೆ:

 

ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಅಂಗಾಂಗ ದಾನದ ವಿಶೇಷ ಕಾರ್ಯಕ್ಕಾಗಿ 80 ಮಂದಿಗೆ ಸನ್ಮಾನ್ಯ ಮುಖ್ಯಮಂತ್ರಿಗಳು ಸನ್ಮಾನಿಸಿ ಪ್ರಂಶಂಸಾ ಪತ್ರ ನೀಡಲಿದ್ದಾರೆ. ಅದಕ್ಕೆ ಬೇಕಾದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಯಿತು. 

ಈ ವೇಳೆ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸ್ನೇಹಲ್, ವಿನೋತ್ ಪ್ರಿಯಾ, ರಮ್ಯಾ, ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ದನಾಯಂದ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ವಲಯ ಜಂಟಿ ಆಯುಕ್ತರು, ಬಿಬಿಎಂಪಿ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಜಲಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.