ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್

Minister Dinesh Gundurao inaugurated the World Mental Health Day programme

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು : ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ರವರು ಉದ್ಘಾಟಿಸಿದರು. 

ಈ ವೇಳೆ ಮಾತನಾಡಿದ ಅವರು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವಲ್ಲಿ ನಮ್ಮ ರಾಜ್ಯ ಇತರ ರಾಜ್ಯಗಳಿಗಿಂತ ಮುಂದಿದೆ. 1985 ರಿಂದ ನಮ್ಮ ರಾಜ್ಯದಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮಗಳು ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿವೆ. ನಮ್ಮ ರಾಜ್ಯದ ಕಾರ್ಯಕ್ರಮಗಳು ರಾಷ್ಟ್ರಮಟ್ಟದಲ್ಲಿ ಪ್ರಭಾವ ಬೀರಿರುವುದು ರಾಜ್ಯಕ್ಕೆ ಹೆಮ್ಮೆ ತಂದಿದೆ.

ಮಾನಸಿಕ ಆರೋಗ್ಯದಂತಹ ವಿಷಯಗಳ ಬಗ್ಗೆ ಮುಕ್ತವಾಗಿ ಮಾತನಾಡಬೇಕು. ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಪ್ತ ಸಲಹೆಗಾರರ ​​ಜೊತೆಗೆ ಆಶಾ ಕಾರ್ಯಕರ್ತೆಯರಿಗೆ ಈ ಕುರಿತು ತರಬೇತಿ ನೀಡಿದ್ದೇವೆ. ಟೆಲಿ ಮೈಂಡ್‌ನಂತಹ ಸಹಾಯವಾಣಿಗಳು ಸಾರ್ವಜನಿಕ ಸಹಾಯಕ್ಕಾಗಿ. ಈಗ ವಿಡಿಯೋ ಕೌನ್ಸೆಲಿಂಗ್ ಅವಕಾಶವಿದ್ದು, ಅಗತ್ಯವಿರುವವರು ಸಹಾಯ ಪಡೆಯಬಹುದು ಎಂದರು.