ಮಂಗಳೂರಿನ ನೆಹರು ಮೈದಾನದಲ್ಲಿ ಸಚಿವ ದಿನೇಶ್ ಗುಂಡೂರಾವ್ ರವರು ನಾಡಧ್ವಜಕ್ಕೆ ಗೌರವ ಸಮರ್ಪಿಸಿದರು

ಮಂಗಳೂರು : 69ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನೆಹರು ಮೈದಾನದಲ್ಲಿ ಸಚಿವ ದಿನೇಶ್ ಗುಂಡೂರಾವ್ ರವರು ನಾಡಧ್ವಜಕ್ಕೆ ಗೌರವ ಸಮರ್ಪಿಸಿದರು.
ಈ ವೇಳೆ ಮಾತನಾಡಿದ ಅವರು ನಮ್ಮ ಭಾಷೆ, ನಮ್ಮ ನಾಡು ನಮ್ಮ ಗುರುತ್ತಾಗಿದ್ದು, ಮೊದಲ ಪ್ರಶಸ್ತ್ಯ ನೀಡಬೇಕಾದದ್ದು ಇವುಗಳಿಗೆ. ಜೀವನದ ಅವಿಭಾಜ್ಯ ಅಂಗವಾಗಿರುವ ಕನ್ನಡ ಭಾಷೆ, ನಮ್ಮ ನಾಡಿನ ಸಂಸ್ಕೃತಿ, ಇತಿಹಾಸ, ಪರಂಪರೆಯನ್ನು ಇಂದಿನ ಪೀಳಿಗೆಗೆ ದಾಟಿಸಬೇಕಾದ ಗುರುತರ ಜವಾಬ್ದಾರಿ ನಮ್ಮ ಮೇಲಿದೆ ಎಂದರು.