ಆತ್ಮಹತ್ಯೆಗೆ ಶರಣಾದ ಯುವಕನ ಮನೆಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, ಪೋಷಕರಿಗೆ ಸಾಂತ್ವನ

ಆತ್ಮಹತ್ಯೆಗೆ ಶರಣಾದ ಯುವಕನ ಮನೆಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, ಪೋಷಕರಿಗೆ ಸಾಂತ್ವನ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಆತ್ಮಹತ್ಯೆಗೆ ಶರಣಾದ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದ ನಿಖಿಲ್ ಕಾಶಪ್ಫ ಪೂಜಾರಿಯ ಪೋಷಕರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಲಾಡಮುಗಳಿ ಗ್ರಾಮದಲ್ಲಿ ಶುಕ್ರವಾರ ಭೇಟಿಯಾಗಿ ಸಾಂತ್ವನ ಹೇಳಿದರು.

ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಯುವಕನ ಆತ್ಮಹತ್ಯೆ ಕುರಿತಂತೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಸಿ ಸಿಗಬೇಕಾಗದ ಸೂಕ್ತ ಪರಿಹಾರ ಬಿಡುಗಡೆ ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಮೃತ ಯುವಕನ ಸಂಬಂಧಿಕರು ಮೃತನ ಸಹೋದರನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಆಗ ಸಚಿವರು ಮೃತನ ಸಹೋದರನ ವಿಧ್ಯಾಭ್ಯಾಸ ಇತ್ಯಾದಿ ಮಾಹಿತಿ ಪಡೆದುಕೊಂಡರು. ಈ ವೇಳೆ ಗ್ರಾಮಸ್ಥರು ಸೇರಿದಂತೆ ಇತರರು ಇದ್ದರು.