ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ರಾಜ್ಯದಾದ್ಯಂತ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆಯ ಹೊರತಾಗಿಯೂ ಕಳೆದ ಒಂದು ವರ್ಷದಲ್ಲಿ ಮೆಟ್ರೋ ರೈಲಿನ ಪ್ರಯಾಣಿಕರ ಸಂಖ್ಯೆ ಶೇಕಡಾ 30ರಷ್ಟು ಹೆಚ್ಚಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವು ಮೆಟ್ರೋ ರೈಲಿನ ಆದಾಯದ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ರಾಮಲಿಂಗಾ ರೆಡ್ಡಿ ಈ ರೀತಿ ತಿರುಗೇಟು ನೀಡಿದ್ದಾರೆ. ರಾಮಲಿಂಗ ರೆಡ್ಡಿ ರವರ ಪ್ರಕಾರ, ಜೂನ್ 11, 2023 ರಂದು ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೊಳಿಸಲಾಯಿತು ಮತ್ತು ಅಂದಿನಿಂದ ನಗರದಲ್ಲಿ ಮೇ 20 ರವರೆಗೆ 67.34 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ.

 Advertisement

ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಇನ್ನು ಕಳೆದ ಒಂದು ವರ್ಷದಲ್ಲಿ ನಮ್ಮ ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆಯು ಶೇಕಡಾ 30 ರಷ್ಟು ಹೆಚ್ಚಾಗಿದೆ. ಜನವರಿ 2023 ರಲ್ಲಿ, ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆ 1.65 ಕೋಟಿ ಇತ್ತು ಮತ್ತು ಆದಾಯ 39.15 ಕೋಟಿ ಆಗಿತ್ತು. ಏಪ್ರಿಲ್ 2024 ರಲ್ಲಿ, ಪ್ರಯಾಣಿಕರ ಸಂಖ್ಯೆ ಎರಡು ಕೋಟಿಗೆ ಏರಿದ್ದು, ಆದಾಯವು 51.71 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಸಚಿವರು ಪ್ರಕಟಣೆಲ್ಲಿ ತಿಳಿಸಿದ್ದಾರೆ.

ಅವರ ಪ್ರಕಾರ, 2023ಕ್ಕೆ ಹೋಲಿಸಿದರೆ 2024 ರಲ್ಲಿ ಪ್ರಯಾಣಿಕರ ಸಂಖ್ಯೆ ತಿಂಗಳಿಗೆ 35 ಲಕ್ಷ ಹೆಚ್ಚಳವಾಗಿದೆ ಮತ್ತು ತಿಂಗಳಿಗೆ 1.10 ಕೋಟಿ ರೂಪಾಯಿ ಆದಾಯ ಹೆಚ್ಚಾಗಿದೆ.