ಧಾರವಾಡ ಲೋಕಸಭೆ: ಕಾಂಗ್ರೆಸ್ ಅಭ್ಯರ್ಥಿ ಅಸೂಟಿ ಪರ ಸಚಿವ ಲಾಡ್ ಸಭೆ

ಧಾರವಾಡ : ಧಾರವಾಡ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನೋದ್ ಅಸೂಟಿ ಪರವಾಗಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಧಾರವಾಡದಲ್ಲಿ ಹಡಪದ ಸಮುದಾಯದ ಮುಖಂಡರು ಹಾಗೂ 35ನೇ ವಾರ್ಡ್ ಗಣೇಶ ನಗರದ ಮಹಿಳಾ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದರು.
ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಹಡಪದ ಸಮುದಾಯದ ಸಮಸ್ತ ಮಹಾಜನತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿ. ಕ್ಷೇತ್ರದಲ್ಲಿ ಬದಲಾವಣೆಗಾಗಿ ಅಸೂಟಿ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿ. ನೀವೆಲ್ಲ ಬೆಂಬಲಿಸುತ್ತೀರಿ ಎಂಬ ವಿಶ್ವಾಸ ಇದೆ ಎಂದು ಹೇಳಿದರು.