ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೇಸ್ ಸೇವಾದಳದ ಜಿಲ್ಲಾ ಅಧ್ಯಕ್ಷರಾಗಿ ಮುನಿಯಪ್ಪರವರ ನೇಮಕ
Muniyappa appointed as District President of Chikkaballapur District Congress Seva Dal
ಬೆಂಗಳೂರು: ಕಾಂಗ್ರೆಸ್ ಜೋಡೋ ಸಭಾಂಗಣದಲ್ಲಿ ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರು ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷರ ಅನುಮೋದನೆ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೇಸ್ ಸೇವಾದಳದ ಜಿಲ್ಲಾ ಅಧ್ಯಕ್ಷರಾಗಿ ಮುನಿಯಪ್ಪರವರನ್ನು ತಕ್ಷಣವೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಸೇವಾದಳ ರಾಜ್ಯಾಧ್ಯಕ್ಷರಾದ ಎಂ.ರಾಮಚಂದ್ರರವರು ಮುನಿಯಪ್ಪರವರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಸೇವಾದಳ ಪ್ರವೀಣ್ ಕುಮಾರ್. ವಕೀಲರಾದ ಆರ್ ವಿ ಮನು. ಜಂಗಮಕೋಟೆ ಮುನಿರಾಜ್. ತಪ್ಪಸಿಹಳ್ಳಿ ಮಹೇಶ್ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಮುನಿಯಪ್ಪರವರು ಮಾತನಾಡಿ ಕಾಂಗ್ರೆಸ್ ಪಕ್ಷದ ಸೇವಾದಳ ವಿಭಾಗ ಎಂದರೆ ಶಿಸ್ತ್ರು, ಸೇವೆ ಎರಡು ನಮ್ಮ ಉದ್ದೇಶವಾಗಿದೆ.
ಕಾಂಗ್ರೆಸ್ ಸೇವಾದಳ ರಾಜ್ಯಾದ್ಯಂತ ಉತ್ತಮ ಸಂಘಟನೆ ಮಾಡಲಾಗಿದೆ, ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಹಾಗೂ ಭಾರತ್ ಜೋಡೋ, ಮೇಕೆದಾಟು ಪಾದಯಾತ್ರೆ ಸೇವಾದಳ ಮುಖಂಡರು, ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ. ಸೇವಾದಳ ಎಂದರೆ ಸೇವಾಮನೋಭಾವನೆಯಿಂದ ಕೆಲಸ ಮಾಡುವುದು, ಜನರ ನಡುವೆ ಇದ್ದು ಜನಸೇವೆ ಮಾಡಲು ಉತ್ತಮ ಸಂಘಟನೆಯಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರತಿ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಸಾಧನೆ, ಯೋಜನೆಗಳನ್ನು ಪ್ರಚಾರ ಮಾಡಲಾಗುವುದು ಎಂದು ಹೇಳಿದರು.