ಸ್ಮೃತಿ ಮಂಧಾನ ಹೊಸ ವಿಶ್ವ ದಾಖಲೆ
New world record by Smriti Mandhana
ಮುಂಬೈ: ಟೀಮ್ ಇಂಡಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಹಿಳಾ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 159 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ ತಂಡವು 15.4 ಓವರ್‌ಗಳಲ್ಲಿ ಈ ಗುರಿಯನ್ನು ಚೇಸ್ ಮಾಡಿದ್ದಾರೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಗೊಳಿಸಿದೆ.
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಸ್ಮತಿ ಮಂಧಾನ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ನ್ಯೂಝಿಲೆಂಡ್‌ನ ಸ್ಟಾರ್ ಆಟಗಾರ್ತಿ ಸುಝಿ ಬೆಟ್ಸ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಸ್ಮತಿ ಮಂಧಾನ ವಿಶ್ವ ದಾಖಲೆ ಬರೆದಿದ್ದಾರೆ.