ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ನಾಮಪತ್ರ ಸಲ್ಲಿಕೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ  ನಾಮಪತ್ರ ಸಲ್ಲಿಕೆ
ಸೌಮ್ಯ ರೆಡ್ಡಿರವರು ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಸಚಿವರಾದ ಎಂ ಕೃಷ್ಣಪ್ಪ, ಮಾಜಿ ಶಾಸಕರಾದ ಆರ್.ವಿ ದೇವರಾಜ್, ವಿಧಾನ ಪರಿಷತ್ ಸದಸ್ಯರಾದ ಯು.ಬಿ ವೆಂಕಟೇಶ್, ಉಮಾಪತಿ ಗೌಡ ಉಪಸ್ಥಿತರಿದ್ದರು.
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸೌಮ್ಯ ರೆಡ್ಡಿರವರು ತಮ್ಮ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ಮೂಲಕ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಸಚಿವರಾದ ರಾಮಲಿಂಗ ರೆಡ್ಡಿ, ಮಾಜಿ ಸಚಿವರಾದ ಎಂ ಕೃಷ್ಣಪ್ಪ, ಪಿ ಜಿ ಆರ್ ಸಿಂಧ್ಯಾ, ಶಾಸಕರಾದ ಪ್ರಿಯಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಯು.ಬಿ ವೆಂಕಟೇಶ್, ಮಾಜಿ ಶಾಸಕರಾದ ಆರ್ ವಿ ದೇವರಾಜ್, ಉಮಾಪತಿ, ಮಾಜಿ ಬಿಬಿಎಂಪಿ ಸದಸ್ಯರಾದ ಬಾಂಧವ ನಾಗರಾಜ್, ಯುವರಾಜ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.