ಪ್ರಯಾಸ್ ಯೋಜನೆ : ಬಿಎಂಟಿಸಿ ನೌಕರರಿಗೆ ಪಿಂಚಣಿ ಆದೇಶ ಪತ್ರ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ನೌಕರರಿಗೆ ಪ್ರಯಾಸ್ ಯೋಜನೆಯಡಿ ಪಿಂಚಣಿ ಆದೇಶಪತ್ರಗಳನ್ನು ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಪ್ರಾದೇಶಿಕ ಭವಿಷ್ಯ ನಿಧಿ ಸಂಯುಕ್ತಾಶ್ರಯದಲ್ಲಿ ಪ್ರಯಾಸ್ ಯೋಜನೆಯಡಿಯಲ್ಲಿ ಅರ್ಹರಿಗೆ ಪಿಂಚಣಿ ಸೌಲಭ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಅರ್ಹ 100ಕ್ಕೂ ಹೆಚ್ಚು ನೌಕರರಿಗೆ ಆದೇಶ ಪತ್ರವನ್ನು ವಿತರಿಸಿದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಕಳೆದ ಮೂರು ವರ್ಷಗಳಿಂದ ಪ್ರಯಾಸ್ ಯೋಜನೆಯಡಿ 160 ಪಿಂಚಣಿ ಆದೇಶಗಳನ್ನು ವಿತರಿಸಲಾಗಿದ್ದು, ಇಡೀ ದೇಶದಲ್ಲಿ ಹಾಗೂ ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಪಿಂಚಣಿ ಆದೇಶ ನೀಡುತ್ತಿರುವ ಸ್ಥಾಪಿತ ಸಂಸ್ಥೆಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯೂ ಒಂದಾಗಿದೆ ಎಂದರು. ಪ್ರಯಾಸ್ ಯೋಜನೆಯಿಂದಾಗಿ ನೌಕರರು ಕೆಲಸ ಮಾಡುವ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ದಾಖಲೆಗಳನ್ನು ಕ್ರೂಢೀಕರಿಸಿ ಮುಂಚಿತವಾಗಿ ಸಲ್ಲಿಸುವುದರಿಂದ ಪಿಂಚಣಿ ಪಾವತಿ ಆದೇಶದ ವಿಲೇವಾರಿ ನೌಕರರ 58ನೇ ವರ್ಷದ ಕೊನೆಯ ದಿನ ವಿತರಿಸಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರು ಸಂಸ್ಥೆಯ ಆಪರ ಬರಿ ಆದೇಶ ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸೇವೆಯಲ್ಲಿರುವ ಎಲ್ಲಾ ನೌಕರರ ಹಾಗೂ ಅವರು ಅವಲಂಬಿತರಿಗೆ ಆರ್ಥಿಕ ಭದ್ರತೆ ಒದಗಿಸುವ ಹಿತದೃಷ್ಟಿಯಿಂದ 1 ಕೋಟಿಯ ವಿಮಾ ಸೌಲಭ್ಯವನ್ನು ಜಾರಿಗೆ ತರಲಾಗಿದೆ ಎಂದರು.