ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ರವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

Protest by Congress workers against BJP State President Vijayendra and BJP MLA Harish Poonja

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ರವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು : ಪ್ರಸ್ತುತ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯದ ಮುಖ್ಯಮಂತ್ರಿ ಆಗಿದ್ದ ಬಿಎಸ್ ಯಡಿಯೂರಪ್ಪನವರ ಆಡಳಿತ ಅವಧಿಯಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ರವರಿಗೆ ವಕ್ಫ್ ಅಕ್ರಮದ ಬಗ್ಗೆ ತನಿಖೆಯ ಮಾಹಿತಿಯನ್ನು ಬಹಿರಂಗಪಡಿಸದಂತೆ 150 ಕೋಟಿ ಆಮಿಷ ಒಡ್ಡಿದ್ದರೂ ಎಂದು ನೇರ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ವಿಜಯೇಂದ್ರನನ್ನ ಕೂಡಲೇ ಬಂಧಿಸಬೇಕು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ರವರು ಮಾತನಾಡಿ ದೇಶದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ರವರೇ ನಿಮಗೆ ಅನ್ವರ್ ಮಾಣಿಪ್ಪಾಡಿ ರವರು ಬರೆದಿರುವ ಪತ್ರ ಇನ್ನೂ ತಮಗೆ ತಲುಪಿಲ್ಲವೇ? ತಲುಪಿದ್ದರೆ ಈ ಭ್ರಷ್ಟಾಚಾರ ಪ್ರಕರಣವನ್ನು ತಾವು ಯಾಕೆ ಸಿಬಿಐ ತನಿಖೆಗೆ ವಹಿಸಿಲ್ಲ ಎಂಬುದನ್ನು ದೇಶದ ಜನತೆಗೆ ತಿಳಿಸಬೇಕು.

ಬಿಜೆಪಿ ಪಕ್ಷದ ವಕ್ತಾರರಾಗಿ ಹಾಗೂ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ವ್ಯಕ್ತಿ ತಮಗೆ ಪತ್ರ ಬರೆದರು ಈ ಪ್ರಕರಣವನ್ನು ಮುಚ್ಚಿ ಹಾಕಲು ತಾವು ಯತ್ನಿಸುತ್ತಿರುವುದು ಈಗ ಬಹಿರಂಗವಾಗಿದೆ.
150 ಕೋಟಿ ಆರೋಪ ಮಾಡಿದರೂ ಸಹ ಸಿಬಿಐ, 
ಇಡಿ, ಆದಾಯ ತೆರಿಗೆ ಇಲಾಖೆಗಳು, ನಿದ್ರಿಸುತ್ತಿದ್ದಿಯೇ? ಈ ಇಲಾಖೆಗಳು ವಿರೋಧ ಪಕ್ಷದ ನಾಯಕರುಗಳ ವಿರುದ್ಧ ಮಾತ್ರ ತನಿಖೆಗೆ ಮುಂದಾಗುತ್ತದೆ ಭ್ರಷ್ಟ ಬಿಜೆಪಿ ಸರ್ಕಾರದ ಮಂತ್ರಿಗಳ ವಿರುದ್ಧ ಹಾಗೂ ನಾಯಕರುಗಳ ವಿರುದ್ಧ ತನಿಖೆಗೆ ಮುಂದಾಗುವುದಿಲ್ಲ ಇದಕ್ಕೆ ನೀವೇ ಮೂಲಕಾರಣಕರ್ತರು ಎಂಬುದು ಸಹ ಈಗ ತಿಳಿದಿದೆ.
ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರಸ್ತುತ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಆನೆಗಳನ್ನು ಕೊಲ್ಲಲು ಅನುಮತಿ ಬೇಕು ಎಂದು ಕೇಳಿರುವುದು ಅತ್ಯಂತ ದುರಾದೃಷ್ಟಕರ ಸಂಗತಿ ವನ್ಯಪ್ರಾಣಿಗಳನ್ನು ಕೊಲ್ಲಲು ಅನುಮತಿ ಕೇಳುವ ಮಟ್ಟಕ್ಕೆ ಇಂತಹ ಕ್ರೂರ ಮನಸ್ಥಿತಿಯ ವ್ಯಕ್ತಿಗಳು ಬಂದಿರುವುದು ವನ್ಯಜೀವಿಗಳ ಸಂರಕ್ಷಣೆಗೆ ವಿರುದ್ಧವಾಗಿದೆ ಬಿಜೆಪಿ ಶಾಸಕರುಗಳ ಕ್ರೂರ ಮನಸ್ಥಿತಿಯನ್ನು ಬಹಿರಂಗಗೊಳಿಸಿದೆ.
ವನ್ಯಜೀವಿಗಳನ್ನ ಕೊಲ್ಲಬೇಕೆಂದು ಬಹಿರಂಗವಾಗಿ ಮನವಿ ಮಾಡಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾನ ವಿರುದ್ಧ ಕೂಡಲೇ ಅರಣ್ಯ ಇಲಾಖೆಯು ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳಲೇಬೇಕು ಮತ್ತು ಆತನನ್ನು ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ಹಾಗೂ ಪ್ರತಿಕೃತಿ ಸುಡಲಾಯಿತು.
ಅನ್ವರ್ ಮಾಣಿಪ್ಪಾಡಿ ರವರು ಮಾಡಿರುವ 150 ಕೋಟಿ ಆರೋಪದ ಹಿನ್ನೆಲೆಯಲ್ಲಿ ಕೂಡಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಿಬಿಐ ತನಿಖೆಗೆ ವಹಿಸಬೇಕೆಂದು ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಸಂದರ್ಭದಲ್ಲಿ ಆಗ್ರಪಡಿಸಲಾಯಿತು ಎಂದರು.
ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಮ್ಮೆ ಅಧ್ಯಕ್ಷರಾದ ಕೇಸ್ ಮನೋಹರ್ ರವರು ಹಾಗೂ ಪ್ರಚಾರ ಸಮಿತಿಯ ಅಧ್ಯಕ್ಷರು ಮುಖಂಡರುಗಳಾದ ಎ.ಆನಂದ್ ಓಬಳೇಶ್,ಪುಟ್ಟರಾಜು,ಚಂದ್ರಶೇಖರ್, ನವೀನ್ ಸುಂಕದಕಟ್ಟೆ . ಕುಶಾಲ್ ಹಾರುವೇಗೌಡ,. ಉಮೇಶ್,ರವಿ,ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.