ಕುಸ್ತಿಪಟುಗಳಾದ ಬಜರಂಗ್‌ ಪುನಿಯಾ ಹಾಗೂ ವಿನೇಶ್ ಫೋಗಟ್ ಭೇಟಿಯಾದ ರಾಗಾ

ಕುಸ್ತಿಪಟುಗಳಾದ ಬಜರಂಗ್‌ ಪುನಿಯಾ ಹಾಗೂ ವಿನೇಶ್ ಫೋಗಟ್ ಭೇಟಿಯಾದ ರಾಗಾ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಇಬ್ಬರು ತಾರಾ ಕುಸ್ತಿಪಟುಗಳನ್ನು ಕಣಕ್ಕಿಳಿಸಬಹುದು ಎನ್ನುವ ಊಹಾಪೋಹಗಳ ನಡುವೆ ರಾಹುಲ್ ಗಾಂಧಿಯವರು ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರನ್ನು ಭೇಟಿಯಾಗಿದ್ದಾರೆ.

ಈ ಭೇಟಿಯಿಂದಾಗಿ ಊಹಿಗೆ ಇನ್ನಷ್ಟು ಪುಷ್ಟಿ ಸಿಕ್ಕಿದೆ. ಈ ನಡುವೆ ಪುನಿಯಾ ಮತ್ತು ಫೋಗಟ್ ಕಣಕ್ಕಿಳಿಯಬಹುದೇ ಎಂಬ ಬಗ್ಗೆ ಗುರುವಾರದ ವೇಳೆಗೆ ಸ್ಪಷ್ಟತೆ ದೊರೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಹರಿಯಾಣ ಉಸ್ತುವಾರಿ ದೀಪಕ್ ಬಬಾರಿಯಾ ಮಂಗಳವಾರ ಹೇಳಿದ್ದರು. ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ ರಾಹುಲ್ ಅವರು ವಿನೇಶ್ ಮತ್ತು ಪೂನಿಯಾ ಅವರನ್ನು ಭೇಟಿಯಾದ ಫೋಟೋ ಹಂಚಿಕೊಂಡಿದೆ. ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು ಮಂಗಳವಾರದವರೆಗೆ 90 ಸ್ಥಾನಗಳ ಪೈಕಿ 66 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇನ್ನೆರಡು ದಿನಗಳಲ್ಲಿ ಉಳಿದ ಸ್ಥಾನಗಳಿಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಲಿದೆ ಎಂದು ಹೇಳಲಾಗಿದೆ. ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಅ.5ರಂದು ಮತದಾನ ನಡೆಯಲಿದ್ದು ಅ.8ರಂದು ಮತ ಎಣಿಕೆ ನಡೆಯಲಿದೆ.