ಏಜೆನ್ಸಿಗಳಿಂದ ವೇತನ ವಿಳಂಬವಾಗುತ್ತಿರುವ ಕುರಿತು ಕ್ರಮ ವಹಿಸಬೇಕೆಂದು ಸಚಿವರಿಗೆ ಮನವಿ
Request to the Minister to take action on the delay in salary by the agencies

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಆರೋಗ್ಯ ಇಲಾಖೆಯ ಡಿ ಗ್ರೂಪ್ ಗುತ್ತಿಗೆ ನೌಕರರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ಏಜೆನ್ಸಿಗಳಿಂದ ವೇತನ ವಿಳಂಬವಾಗುತ್ತಿರುವ ಕುರಿತು ಕ್ರಮ ವಹಿಸಬೇಕು ಎಂದು ನೌಕರರು ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ರವರು ಮಾತನಾಡಿ ಡಿ ಗ್ರೂಪ್ ಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿಗೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಈ ವ್ಯವಸ್ಥೆ ಜಾರಿಯಾಗಲಿದೆ ಎಂದು ನೌಕರರಿಗೆ ಭರವಸೆ ನೀಡಿದರು. ಜನತೆಗೆ ಉತ್ತಮ ಆರೋಗ್ಯ ಸೇವೆಗಳು ತಲುಪಿಸುವಲ್ಲಿ ಸಿಬ್ಬಂದಿ ಪಾತ್ರ ಪ್ರಮುಖವಾಗಿದ್ದು, ನೌಕರರಿಗೆ ಆರ್ಥಿಕ ಭದ್ರತೆ ಒದಗಿಸುವುದು ನಮ್ಮ ಕರ್ತವ್ಯ ಎಂದರು.