ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಶ್ರೀ ಸತ್ಯನಾರಾಯಣ ವ್ರತಪೂಜೆ

Shri Satyanarayan pooja at Shri Raghavendraswamy's Mutt

ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಶ್ರೀ ಸತ್ಯನಾರಾಯಣ ವ್ರತಪೂಜೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು : ಬೆಂಗಳೂರಿನ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಪರಮಪೂಜ್ಯ  ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ  ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್‌. ಕೆ. ವಾದೀಂದ್ರಾಚಾರ್ಯರ ಮಾರ್ಗದರ್ಶನದಲ್ಲಿ "ಪೌರ್ಣಮಿ" ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆಯನ್ನು ಪುರೋಹಿತರಾದ ಶ್ರೀ ನಂದಕಿಶೋರಾಚಾರ್ಯರು ಮತ್ತು ಶ್ರೀ ರಾಘವೇಂದ್ರ ಆಚಾರ್ಯರು ನೆರವೇರಿಸಿದರು.

ಈ ಸಂದರ್ಭದಲ್ಲಿ ನೂರಾರು ಭಕ್ತರು ಮತ್ತು ಸೇವಾ ಕರ್ತೃಗಳು ಈ ಸತ್ಯನಾರಾಯಣ ವ್ರತದ  ಪೂಜೆಯ ಸಂಕಲ್ಪವನ್ನು ಮಾಡಿ ವ್ರತದ ಪೂಜೆಯಲ್ಲಿ  ಭಕ್ತರು ಪಾಲ್ಗೊಂಡು ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ  ಪಾತ್ರರಾದರು. ಹಾಗೂ  ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಲಂಕಾರ ಮತ್ತು ವಿಶೇಷ ಉತ್ಸವಗಳು ನೆರವೇರಿತು.