ನಶೆಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಜ್ಞೆ ಸ್ವೀಕರ

Students took pledge under the drug free India campaign

ನಶೆಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಜ್ಞೆ ಸ್ವೀಕರ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಉತ್ತರ ತಾಲ್ಲೂಕು ವತಿಯಿಂದ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಸವೇಶ್ವರ ಪ್ರೌಢಶಾಲೆ ಯಲ್ಲಿ ಇಂದು ನಶೆಮುಕ್ತ ಭಾರತ ಅಭಿಯಾನದಡಿ 78 ನೇ ಸ್ವಾತಂತ್ರ ದಿನೊತ್ಸವ ಅಂಗವಾಗಿ ಮಾದಕ ವಸ್ತು ಸೇವನೆ ಮಾಡದಿರಲು ಎಲ್ಲ ಶಾಲೆ ಕಾಲೇಜುಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಜ್ಞೆ ಸ್ವೀಕರಿಸುವ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ನಶೆ ಮುಕ್ತ ಭಾರತ ಅಭಿಯಾನ ಪ್ರಾರಂಭವಾಗಿ 5 ನೇ ವರ್ಷಕ್ಕೆ ಕಾಲಿಡುತ್ತಿದ್ದು, ಈ ಸುಸಂದರ್ಭಲ್ಲಿ ಇಲಾಖೆ ವತಿಯಿಂದ ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳಿಂದ ದೂರವಿರಲು ಜಾಗೃತಿ ಅಭಿಯಾನ ಮಾಡಲಾಗುತ್ತಿದೆ. ಬಸವೇಶ್ವರ ಪ್ರೌಢಶಾಲೆಯ ಮುಖ್ಯಯೊಪಾಧ್ಯಾಯರಾದ ಕೆ ವಿ ಬಸವಯ್ಯ ಅವರ ಸಹಕಾರದೊಂದಿಗೆ ವಿಕಲಚೇತನ ಹಾಗೂ ಸಬಲೀಕರಣ ಇಲಾಖೆ ಸಿಬ್ಬಂದಿಗಳಾದ ಅರುಣ್ ಕುಮಾರ್, ಮಲ್ಲಿಕಾರ್ಜುನ ಹಿರೇಮಠ, ಹಾಗೂ ಗುಣಶೇಖರ್ ಪಾಲ್ಗೊಂಡು ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಲೆಯ ಎಲ್ಲ ಶಿಕ್ಷಕರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಕಾರ್ಯಕ್ರಮ ಕುರಿತು ಮಾತನಾಡಿದ ಅರುಣಕುಮಾರ್ ಅವರು ಇಂದಿನ ಜಾಗತಿಕ ವೈಜ್ಞಾನಿಕ ಯುಗದಲ್ಲಿ ಎಲ್ಲರಿಗೂ ಧಾವಂತ ಇಂದಿನ ಮಕ್ಕಳು ಪ್ರಾಥಮಿಕ ಶಾಲಾ ಹಂತದಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯಕರ ಜೀವನ ನಡೆಸುವಂತೆ ಕರೆ ನೀಡಿ ದೇವರು ನಿಮಗೆ ಎಲ್ಲ ರೀತಿಯ ಅರೋಗ್ಯ ನೀಡಿದ್ದು, ಅದನ್ನು ಕಾಪಾಡಿಕೊಂಡು ಹೋಗುವಂತೆ ಸಲಹೆ ನೀಡಿದರು.