ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ
Talent Awards and Honors Ceremony
ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಮದುರ್ಗದ ಬಸವ ಗಾರ್ಡನ್ನಲ್ಲಿ ಇಂದು ಬೆಂಗಳೂರಿನ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಮದುರ್ಗ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಅಶೋಕ ಮ. ಪಟ್ಟಣ, ನಿಖಿಲ್ ಉ. ಕತ್ತಿ, ಮಾಜಿ ಶಾಸಕರಾದ ಮಹಾದೇವಪ್ಪ ಶಿ. ಯಾದವಾಡ, ಬಸವನ ಬಾಗೇವಾಡಿಯ ಅಕ್ಕನಾಗಮ್ಮ ಪ್ರೌಢಶಾಲೆಯ ಅಧ್ಯಾಪಕರಾದ ಅಶೋಕ ಹಂಚಳಿ, ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಮದುರ್ಗ ತಾಲೂಕು ಘಟಕದ ಅಧ್ಯಕ್ಷರಾದ ಗುರು ಸಿದ್ದಪ್ಪ ನಿಂ. ಮುತ್ತೂರ, ತಾಲೂಕಾ ಯುವ ಘಟಕದ ಅಧ್ಯಕ್ಷರಾದ ರಾಜು ಬೆಂಬಳಗಿ, ಹರ್ಷಿತಾ ಸವಣೂರ, ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾದ ಪ್ರಭಾವತಿ ಪುಟಾಣಿ ಉಪಸ್ಥಿತರಿದ್ದರು.