"ಜೀನಿಯಸ್ ಮುತ್ತ" ಚಲನಚಿತ್ರ ಆಗಸ್ಟ್ ನಲ್ಲಿ ತೆರೆಗೆ
The movie "Genius Muttu" will be screening in August
ಬೆಂಗಳೂರು: ಖ್ಯಾತ ನಿರ್ದೇಶಕ ಟಿ.ಎಸ್.ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ "ಜೀನಿಯಸ್ ಮುತ್ತ" ಆಗಸ್ಟ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಜಿ.ಎಸ್.ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ "ಜೀನಿಯಸ್ ಮುತ್ತ" ನಾಗಿ ಮಾಸ್ಟರ್ ಶ್ರೇಯಸ್ಸೇ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ "ಚಿನ್ನಾರಿಮುತ್ತ" ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ. ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
ನಿರ್ದೇಶಕಿ ನಾಗಿಣಿ ಭರಣ ಮಾತನಾಡಿ ನನಗೆ ಹಲವು ವರ್ಷಗಳಿಂದ ನಿರ್ದೇಶನ ಮಾಡುವಂತೆ ಎಲ್ಲರೂ ಹೇಳುತ್ತಿದ್ದರು ಆಗಿರಲಿಲ್ಲ. ಆದರೆ ಲತಾ ಅವರು ತಮ್ಮ ಮಗನನ್ನು ಚಿತ್ರರಂಗಕ್ಕೆ ಪ್ರವೇಶಿಸಬೇಕೆಂದುಕೊಂಡಿದ್ದೇನೆ. ಆ ಚಿತ್ರವನ್ನು ನೀವೇ ನಿರ್ದೇಶಿಸಬೇಕೆಂದರು. ಅವರ ಒತ್ತಾಯಕ್ಕೆ ಮಣಿದು ನನ್ನ ಸ್ನೇಹಿತರ ತಂಡದೊಂದಿಗೆ ಸೇರಿ ಈ ಚಿತ್ರದ ಕಥೆ ಸಿದ್ದ ಮಾಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಮಾಸ್ಟರ್ ಶ್ರೇಯಸ್ಸೇ, ವಿಜಯ ರಾಘವೇಂದ್ರ, ಟಿ.ಎಸ್.ನಾಗಾಭರಣ, ಗಿರಿಜಾ ಲೋಕೇಶ್, ಸುಂದರರಾಜ್, ಪನ್ನಗಾಭರಣ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಒಂದು ಅಂತರ್ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಾಗೂ ವಿದೇಶಗಳಲ್ಲಿ ನಮ್ಮ ಚಿತ್ರದ ಪ್ರದರ್ಶನವಾಗಿದೆ. ನೋಡಿದವರು ಮೆಚ್ಚುಗೆ ಮಾತುಗಳಾಡಿದ್ದಾರೆ. ಆಗಸ್ಟ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.