ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ : ಬಿ.ವೈ ವಿಜಯೇಂದ್ರ

There is no room for factional politics in BJP: B.Y Vijayendra

ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ : ಬಿ.ವೈ ವಿಜಯೇಂದ್ರ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು : ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕೆಂದು ವಿನಂತಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರರವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಮುಂದುವರೆದಂತೆ  ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ಕಾರ್ಯಕ್ರಮಳಡಿಯಲ್ಲಿ ಪಕ್ಷದ ಹಿರಿಯರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲ ಹಿರಿಯರೊಂದಿಗೆ ಅತೀ ಶೀಘ್ರದಲ್ಲೇ ಸಭೆ ಕರೆಯಲಿದ್ದೇನೆ. 

ಭಾರತೀಯ ಜನತಾ ಪಾರ್ಟಿ ಕೂಡು ಕುಟುಂಬವಿದ್ದಂತೆ, ಪಕ್ಷದ ಚೌಕಟ್ಟಿನಲ್ಲೇ ಪ್ರತಿಯೊಂದು ಸಭೆ, ಕಾರ್ಯಕ್ರಮಗಳು ನಡೆಯಬೇಕೇ ಹೊರತು ಪಕ್ಷದ ನಿಯಮ, ಧ್ಯೇಯಗಳನ್ನು ಬದಿಗೆ ಸರಿಸಿ ಯಾವುದೇ ಚಟುವಟಿಕೆಗಳನ್ನು ನಡೆಸುವುದು ಸಂಘಟನೆಯ ಆಶಯಕ್ಕೆ ಪೂರಕವಾಗಿಲ್ಲದಿರುವುದನ್ನು ವಿನಮ್ರತೆಯಿಂದ ಸಹೃದಯರಲ್ಲಿ ತಿಳಿಸಬಯಸುತ್ತೇನೆ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.