ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ವಿ.ಸತ್ಯ ನೇಮಕ
V. Satya appointed as Bangalore Central District Congress Committee General Secretary
ಬೆಂಗಳೂರು: ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ವಿ ಸತ್ಯ ರವರಿಗೆ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷರಾದ ಕೆ ವಿ ಗೌತಮ್ ರವರು ಇಂದು ವಿ. ಸತ್ಯ.ರವರಿಗೆ ನೇಮಕಾತಿ ಆದೇಶ ಪತ್ರ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ವಿ.ಸತ್ಯರವರು ಮಾತನಾಡಿ ಕಾಂಗ್ರೆಸ್ ಪಕ್ಷ ಬಡವರ ಪರ ಹೋರಾಟ ಮಾಡುವ ಪಕ್ಷ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ರವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡುತ್ತಿದ್ದೇನೆ. ಸಚಿವರಾದ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಲಾಗಿದೆ.
ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಅನ್ನಭಾಗ್ಯ ಯೋಜನೆ ಮತ್ತು ಶಕ್ತಿ ಯೋಜನೆ, ಮನೆಯ ಯಾಜಮಾನಿಗೆ 2000ಸಾವಿರ ಸಹಾಯಧನ, 200ಯೂನಿಟ್ ವಿದ್ಯುತ್ ಉಚಿತ ಹಾಗೂ ಯುವ ನಿಧಿ ಯೋಜನೆಗಳನ್ನು ರಾಜ್ಯದ ಕೊಟ್ಯಂತರ ಜನರ ಫಲಾನುಭವಿಗಳು ಇದ್ದಾರೆ. ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಲ್ಲ ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಕಾರ್ಯಯೋಜನೆ ರೂಪಿಸಿ ಸಂಘಟನೆ ಮಾಡಲಾಗುತ್ತದೆ ಎಂದು ಹೇಳಿದರು.