ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ

ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಸಂಸ್ಥೆಯ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು ಹಾಗೂ ಅಧಿಕಾರಿಗಳು ಸಿಬ್ಬಂದಿಗಳು ಪರಿಸರ ಸಂರಕ್ಷಣೆ ಬಗ್ಗೆ ಸಂಸ್ಥೆ ಆವರಣದಲ್ಲಿ ಜಾಗೃತಿ ಜಾತವನ್ನು ನಡೆಸಿದರು.

 ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರಿಯ ಸಂಸ್ಥೆಯ ಅಧ್ಯಕ್ಷರಾದ ಎಸ್.ಮನೋಹರ್ ರವರು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಧರ್ ರವರು ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಂಸ್ಥೆ ಆವರಣದಲ್ಲಿ ಪರಿಸರ ಸ್ವಚ್ಛತೆ ಕಾಪಾಡಲು ಅರಿವಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಂಸ್ಥೆ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಉತ್ತಮ ಪರಿಸರ ಕಾಪಾಡಿಕೊಳ್ಳಲು ಸಿಬ್ಬಂದಿ ವರ್ಗದವರಿಗೆ ಸೂಚಿಸಿದರು.

 ಅರಣ್ಯ ಇಲಾಖೆಯಿಂದ ಪಡೆದ ಗಿಡಗಳನ್ನು ಪ್ರತಿಯೊಬ್ಬ ಸಿಬ್ಬಂದಿಯು ನೆಡುವುದರ ಮೂಲಕ ಮರಗಳ ಪೋಷಣೆಗೆ ಕಾಳಜಿ ವಹಿಸುವುದಾಗಿ ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಗೆ ಭರವಸೆಯನ್ನ ನೀಡಿದರು.